ಎಲ್ಲರಿಗೂ ನಮಸ್ಕಾರ, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ನೀವು ಕೂಡ ಉಚಿತ ಲ್ಯಾಪ್ ಟಾಪ್ ಪಡೆದುಕೊಳ್ಳಬೇಕೆ..? ಯಾರಿಗೆ ಲ್ಯಾಪ್ ಟಾಪ್ (Free Laptop Scheme) ನೀಡುತ್ತಾರೆ..? ಹಾಗೂ ಯಾವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ದೊರೆಯಲಿದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಸರ್ಕಾರವು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ. ಅವುಗಳಲ್ಲಿ ಉಚಿತ ಲ್ಯಾಪ್‌ಟಾಪ್ ಯೋಜನೆಯು ಒಂದಾಗಿದೆ. ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುವುದರಿಂದ ಅವರ ಅಧ್ಯಯನಕ್ಕೆ ಸಾಕಷ್ಟು ಅನುಕೂಲವಾಗುತ್ತದೆ.
Karnataka Free Laptop Scheme 2024:
2023-24 ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಯಲ್ಲಿ SSLC ಪರೀಕ್ಷೆಯಲ್ಲಿ ಜಿಲ್ಲಾವಾರು ಮತ್ತು ತಾಲ್ಲೂಕುವಾರು ಅತಿ ಹೆಚ್ಚು ಅಂಕಗಳನ್ನು ಪಡೆದಿರುವ 03 ವಿದ್ಯಾರ್ಥಿಗಳಿಗೆ ಹಾಗೂ ಸಮಾನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಗಳನ್ನು ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ.
ಉಚಿತ ಲ್ಯಾಪ್ ಟಾಪ್ ಯೋಜನೆಗೆ ಆಯಾ ಜಿಲ್ಲೆಗೆ ಸಂಬಂಧಿಸಿದಂತೆ ಅತಿ ಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳನ್ನು ಪರಿಶೀಲಿಸಿ ತಿದ್ದುವಡಿ/ ಸೇರ್ಪಡೆ ವಿವರಗಳನ್ನು ಇ-ಮೇಲ್ ಮುಖಾಂತರ ಹಾಗೂ ಮುದ್ರಿತ ಪ್ರತಿಯನ್ನು ಮಂಡಳಿಗೆ ಸಲ್ಲಿಸುವಂತೆ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಶಿಕ್ಷಣ ಇಲಾಖೆಯು ಸೂಚಿಸಿದೆ.
ಇತರೆ ಮಾಹಿತಿಗಳನ್ನು ಓದಿ: