Gruha Arogya Scheme: “ಗೃಹ ಆರೋಗ್ಯ” ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರವು ಬಡವರಿಗಾಗಿ ಹಲವಾರು ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಇಂತಹ ಯೋಜನೆಗಳಿಂದ ಬಡವರಿಗೆ ಸಾಕಷ್ಟು ಉಪಯೋಗವಾಗುತ್ತಿದೆ. “ಗೃಹ ಆರೋಗ್ಯ” (Gruha Arogya Scheme) ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಚಾಲನೆ ನೀಡಿದ್ದಾರೆ.

ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆ ವಿಚಾರದಲ್ಲಿ ಒಂದು ದೂರದೃಷ್ಟಿಯ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇದೀಗ ‘ಗೃಹ ಆರೋಗ್ಯ’ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ಈ ಯೋಜನೆಗೆ ಚಾಲನೆ ನೀಡಿದ್ದಾರೆ. ಜನವರಿ ತಿಂಗಳಿನಲ್ಲಿ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿಗೆ ಬರಲಿದೆ. ಈ ಕುರಿತಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯನವರು ಅಸಾಂಕ್ರಾಮಿ ರೋಗಗಳ ನಿಯಂತ್ರಣ ಹಾಗೂ ನಿರ್ವಹಣೆಯ ಮಹತ್ವಾಕಾಂಕ್ಷೆಯೊಂದಿಗೆ “ಗೃಹ ಆರೋಗ್ಯ” (Gruha Arogya Scheme) ಯೋಜನೆಗೆ ಇಂದು ಚಾಲನೆ ನೀಡುತ್ತಿದ್ದೇನೆ. ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಈ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (BP), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್‌ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ ಹಂತದ ತಪಾಸಣೆಗಳು ಮನೆ ಬಾಗಿಲಲ್ಲಿ ದೊರೆಯಲಿವೆ.

Gruha Arogya Scheme- ಗೃಹ ಆರೋಗ್ಯ ಯೋಜನೆ:

  • ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಸುರಕ್ಷಾಣಾಧಿಕಾರಿಗಳು ಸೇರಿದಂತೆ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗಳಿಗೆ ಭೇಟಿ ನೀಡಿ 30 ವರ್ಷ ಮೇಲ್ಪಟ್ಟ ಜನರ ರಕ್ತದೊತ್ತಡ, ಮಧುಮೇಹ ತಪಾಸಣೆ ನಡೆಸಲಿದ್ದಾರೆ.
  • ವಾರದಲ್ಲಿ ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರದಂದು ದಿನಕ್ಕೆ 15 ಮನೆಗಳಂತೆ ಭೇಟಿ ನೀಡಿ ತಪಾಸಣೆ ಕಾರ್ಯ ಮಾಡುತ್ತಾರೆ.
  • ಬಾಯಿ ಕ್ಯಾನ್ಸರ್, ಮಹಿಳೆಯರ ಗರ್ಭಕಂಠ ಮತ್ತು ಸ್ತನ ಕ್ಯಾನ್ಸ‌ರ್ ಸೇರಿದಂತೆ ಸಹ ಭೇಟಿಯ ಸಂದರ್ಭದಲ್ಲಿ ಪರೀಕ್ಷಿಸಲಾಗುತ್ತದೆ.
  • ಅಸಂಕ್ರಾಮಿಕ ರೋಗಗಳಿಂದ ದೂರವಿರಲು ಜೀವನಶೈಲಿ ಮಾರ್ಪಾಡು ಮಾಡಲು ಆರೋಗ್ಯ ಸಿಬ್ಬಂದಿಯಿಂದ ಸಲಹೆ ನೀಡಲಾಗುತ್ತದೆ.
  • ರೋಗಗಳಿಗೆ ದೃಢಪಟ್ಟ ಪ್ರಕರಣಗಳಿಗೆ ಅಗತ್ಯ ಔಷಧಿಗಳನ್ನು ಮಾತ್ರೆ ಪಟ್ಟಿಗೆ ಮುಖಾಂತರ ಜನರ ಬಳಿಗೆ ಒದಗಿಸಲು ಯೋಜನೆಯಲ್ಲಿ ರೂಪ ರೇಷ ಸಿದ್ಧಪಡಿಸಲಾಗಿದೆ.
  • ಕೋಲಾರ ಜಿಲ್ಲೆಯಿಂದ ಯೋಜನೆ ಆರಂಭವಾಗುತ್ತಿದ್ದು, ಜನವರಿ ತಿಂಗಳ ಬಳಿಕ ರಾಜ್ಯಾದ್ಯಂತ ಯೋಜನೆ ಜಾರಿಗೆ ಬರಲಿದೆ.

ಇತರೆ ಮಾಹಿತಿಗಳನ್ನು ಓದಿ:

ಉಚಿತ ಹೊಲಿಗೆ ಯಂತ್ರ ಯೋಜನೆ 2024

ಗೃಹಲಕ್ಷ್ಮೀ ಯೋಜನೆ DBT Status ಚೆಕ್ ಮಾಡಿ

ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

Leave a Comment