ಎಲ್ಲರಿಗೂ ನಮಸ್ಕಾರ, ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್. ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ (KSP Recruitment 2024) ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರೀಯೆ ಆರಂಭಿಸಲಿದೆ. ಹುದ್ದೆಗಳ ಮಾಹಿತಿ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಓದಿರಿ.
ಪೋಲಿಸ್ ಇಲಾಖೆಯಲ್ಲಿ ಖಾಲಿ ಇರುವ 4115 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆ ಹೊರಡಿಸಲಿದ್ದಾರೆ.
3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು, ಹಾಗೂ 615 ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳು. 2023-24ನೇ ಸಾಲಿನ ಹಾಗೂ 2022-23 ನೇ ಸಾಲಿನಲ್ಲಿ ಭರ್ತಿ ಮಾಡಬೇಕಿದ್ದ, ಪ್ರಸ್ತಾವನೆ ಸಲ್ಲಿಸಲಾಗಿರುವ ಹುದ್ದೆಗಳು ಇವಾಗಿವೆ.
KSP Recruitment 2024 ಹುದ್ದೆಗಳ ವಿವರ:
- ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR / DAR) – 2000
- ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ (SRPC ) (KSRP) – 1500
- ಪೊಲೀಸ್ ಸಬ್ಇನ್ಸ್ಪೆಕ್ಟರ್ – 300
- ಪೊಲೀಸ್ ಸಬ್ಇನ್ಸ್ಪೆಕ್ಟರ್ – 300
- ಡೆಪ್ಯೂಟಿ ಸಬ್ ಇನ್ಸ್ಪೆಕ್ಟರ್ – 15
ಮೇಲಿನ ಎಲ್ಲಾ ಹುದ್ದೆಗಳಿಗೆ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, ಮುಂದಿನ 3 ತಿಂಗಳ ಒಳಗಾಗಿ ಅಧಿಸೂಚನೆ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಆದರೆ ನೇಮಕಾತಿ ಜರೂರು ಆದೇಶ ಗೃಹ ಇಲಾಖೆಯಿಂದ ಬಂದಲ್ಲಿ 40 ದಿನಗಳೊಳಗೆ ಸಹ ಅಧಿಸೂಚನೆ ಹೊರಡಿಸುವ ಸಾಧ್ಯತೆಗಳಿವೆ .
ಶೈಕ್ಷಣಿಕ ಅರ್ಹತೆ:
- ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR / DAR) – SSLC/ 10th /ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ (SRPC ) (KSRP) – SSLC/10th/ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಪೊಲೀಸ್ ಸಬ್ಇನ್ಸ್ಪೆಕ್ಟರ್ – ಪದವಿ
- ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) – 12 th ಪಾಸ್
Karnataka Police Recruitment ಪ್ರಮುಖ ಲಿಂಕ್’ಗಳು:
ಅರ್ಜಿ ಸಲ್ಲಿಕೆ ಲಿಂಕ್: ಅತಿ ಶೀಘ್ರದಲ್ಲೇ ಲಭ್ಯ
ಪೊಲೀಸ್ ಇಲಾಖೆ ಅಧಿಕೃತ ಲಿಂಕ್: ಚೆಕ್ ಮಾಡಿ
ಇತರೆ ಮಾಹಿತಿಗಳನ್ನು ಓದಿ: