ಎಲ್ಲರಿಗೂ ನಮಸ್ಕಾರ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಗಳಿಗೆ ಆರ್ಥಿಕ ಸಹಾಯಕ್ಕಾಗಿ ಸರ್ಕಾರದಿಂದ ನೀಡಲಾಗುವ ವಿದ್ಯಾರ್ಥಿವೇತನ (SSP Scholarship 2024) ದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ. ಅರ್ಹ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಸರ್ಕಾರದಿಂದ ನೀಡಲಾಗುವ SSP ವಿದ್ಯಾರ್ಥಿವೇತನ ಪಡೆಯಬೇಕೆ? ಹಾಗಿದ್ದರೆ ಈ ಲೇಖನ ನಿಮಗಾಗಿ. ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ ಇತ್ಯಾದಿ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಕರ್ನಾಟಕ ಸರ್ಕಾರದಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡಲು SSP ಮೂಲಕ ಆನ್ಲೈನ್ ಅರ್ಜಿ ಆಹ್ವಾನಿಸಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಅರ್ಹ ವಿದ್ಯಾರ್ಥಿಗಳು ಸರ್ಕಾರದ ವಿದ್ಯಾರ್ಥಿವೇತನದ ಸೌಲಭ್ಯ ಪಡೆಯಬಹುದು.
SSP Scholarship 2024-25 For Post Matric Students
ಮೇಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ, ಪದವಿ, ಡಿಪ್ಲೊಮಾ, ತಾಂತ್ರಿಕ ಮತ್ತು ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತೀರುವ ಕರ್ನಾಟಕ ರಾಜ್ಯದಲ್ಲಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
SSP Post Matric Scholarship 2024 Documents:
- SSLC ಅಂಕಪಟ್ಟಿ
- ಆಧಾರ್ ಸಂಖ್ಯೆ
- ಮೊಬೈಲ್ ಸಂಖ್ಯೆ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇ-ಮೇಲ್ ಐ.ಡಿ
- ಕಾಲೇಜು ದಾಖಲಾತಿ/ನೋಂದಣಿ ಸಂಖ್ಯೆ
- ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
- ವಿದ್ಯಾರ್ಥಿಯು ವಾಸವಿರುವ ಜಿಲ್ಲೆ , ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ
- ಸಂಬಂದಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ )
- ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ )
- ಕುಟುಂಬ ಗುರುತಿನ ಸಂಖ್ಯೆ
- ಹಾಗೂ ಇತರೆ ಅಗತ್ಯ ದಾಖಲೆಗಳು
SSP Post Matric Scholarship For OBC Students:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನೀಡುವ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ (Vidyasiri Scholarship) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ / ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Post Matric SSP Scholarship ಪ್ರಮುಖ ಲಿಂಕ್ಗಳು
ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
ಅಧಿಕೃತ ವೆಬ್ಸೈಟ್: ssp.postmatric.karnataka.gov.in
SSP Scholarship 2024-25 For Post Matric Last Date:
ಇತರೆ ಮಾಹಿತಿಗಳನ್ನು ಓದಿ: