ಎಲ್ಲರಿಗೂ ನಮಸ್ಕಾರ, ನೀವು ಕೂಡಾ ಮೆಟ್ರಿಕ್ ನಂತರದ ಕೊರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿದ್ದೀರಾ..? ಶುಲ್ಕ ಮರುಪಾವತಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಬೇಕೆ..? SSP Scholarship 2024 ಯಾರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.
ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಆಸಕ್ತ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2024-25 ನೇ ಸಾಲಿಗೆ 12th, ಡಿಪ್ಲೊಮಾ, ITI, ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಶುಲ್ಕ ಮರುಪಾವತಿ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಬಹುದು.
SSP Scholarship 2024 ಅರ್ಹತೆಗಳು:
- ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರು ಅರ್ಜಿ ಸಲ್ಲಿಸಬಹುದು.
- ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
- ಮೆಟ್ರಿಕ್ ನಂತರದ ಕೋರ್ಸುಗಳ ಶುಲ್ಕ ಮರುಪಾವತಿ ಯೋಜನೆಗಾಗಿ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 2 ಲಕ್ಷ ಒಳಗಿರಬೇಕು. ಮತ್ತು ಮೆರಿಟ್-ಕಮ್-ಮೀನ್ಸ್ ಶುಲ್ಕ ಮರುಪಾವತಿ ಯೋಜನೆಗಾಗಿ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು .2.5 ಲಕ್ಷ ರೂ ಮೀರಿರಬಾರದು.
ವಿಶೇಷ ಸೂಚನೆ:
- ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು NPCI ಮ್ಯಾಪಿಂಗ್ ಆಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.
- ಈ ಹಿಂದೆ ಸದರಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕು,
- ಸದರಿ ಶುಲ್ಕ ಮರುಪಾವತಿ ಯೋಜನೆಯ ಪ್ರಕ್ರಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳು ಹಾಗೂ ಮಾರ್ಗಸೂಚಿಗಳಿಗೆ ಒಳಪಟ್ಟಿರುತ್ತದೆ.
SSP Post Matric Scholarship 2024 Documents:
- ಮೊಬೈಲ್ ಸಂಖ್ಯೆ
- ಆಧಾರ್ ಸಂಖ್ಯೆ
- SSLC ಮಾರ್ಕ್ಸ್ ಕಾರ್ಡ್
- ಇ-ಮೇಲ್ ಐ.ಡಿ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಕಾಲೇಜು ದಾಖಲಾತಿ/ನೋಂದಣಿ ಸಂಖ್ಯೆ
- ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
- ಮನೆಯ ವಿಳಾಸ ಪುರಾವೆ
- ಕುಟುಂಬ ಗುರುತಿನ ಸಂಖ್ಯೆ
- ಸಂಬಂದಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ )
- ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ )
- ಹಾಗೂ ಇತರೆ ಅಗತ್ಯ ದಾಖಲೆಗಳು
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಜಿಲ್ಲಾ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು (MIC) ಸಂಪರ್ಕಿಸಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23-08-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-10-2024
Post Matric SSP Scholarship ಪ್ರಮುಖ ಲಿಂಕ್ಗಳು
ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
ಅಧಿಕೃತ ವೆಬ್ಸೈಟ್: ssp.postmatric.karnataka.gov.in, dom.karnataka.gov.in
ಇತರೆ ಮಾಹಿತಿಗಳನ್ನು ಓದಿ: