ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರವು ನೀಡುತ್ತಿರುವ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಬೇಕೆ..? Prize Money Scholarship ಗೆ ಯಾರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಎಷ್ಟು ಪ್ರೋತ್ಸಾಹಧನ ದೊರೆಯಲಿದೆ..? ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿ.
ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
SSLC Prize Money Scholarship 2024 ಅರ್ಜಿ ಆಹ್ವಾನ:
2023-24ನೇ ಸಾಲಿನಲ್ಲಿ SSLC ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಶೇ.60 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪ್ರಥಮ ದರ್ಜೆಯಲ್ಲಿ ಪಾಸಾಗಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿಯನ್ನು ಆಹ್ವಾನಿಸಿದೆ.
SSLC ಪರೀಕ್ಷೆಯಲ್ಲಿ ಶೇ 60 ಕ್ಕಿಂತ ಹೆಚ್ಚು ಶೇ.75 ರವರೆಗೆ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳು ಈ ಪ್ರೋತ್ಸಾಹಧನ ಪಡೆಯಲು ಅರ್ಹರು. ಶೇ 60 ರಷ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಗೆ 7,000 ರೂ. ಹಾಗೂ ಶೇ. 75 ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ ವಿದ್ಯಾರ್ಥಿಗಳಿಗೆ 15,000 ರೂ. ಪ್ರೋತ್ಸಾಹಧನ ನೀಡುತ್ತಾರೆ.
PUC Prize Money Scholarship 2024 ಅರ್ಜಿ ಆಹ್ವಾನ:
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24 ನೇ ಸಾಲಿನಲ್ಲಿ PUC ಹಾಗೂ ಅಂತಿಮ ಪದವಿ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಶೇಕಡಾ 60ಕ್ಕಿಂತ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಹ ವಿದ್ಯಾರ್ಥಿಗಳಿಗೆ 20,000 ರೂ. ಪ್ರೋತ್ಸಾಹಧನ ನೀಡುತ್ತಾರೆ.
ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ sw.kar.nic.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ದೃಢೀಕೃತ ದಾಖಲೆಗಳೊಂದಿಗೆ ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಸಲ್ಲಿಸಬೇಕು.
SC ST Prize Money Scholarship 2024 ಪ್ರಮುಖ ಲಿಂಕ್ಗಳು:
sw.kar.nic.in prize money 2024-25 ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
ಅಧಿಕೃತ ವೆಬ್ಸೈಟ್ಗಳು: sw.kar.nic.in, swdservices.karnataka.gov.in
ಇತರೆ ಮಾಹಿತಿಗಳನ್ನು ಓದಿ: