ಎಲ್ಲರಿಗೂ ನಮಸ್ಕಾರ, ಹೊಸ ಪಡಿತರ ಚೀಟಿ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದೆ. ನೀವು ಕೂಡ ಹೊಸ ರೇಷನ್ ಕಾರ್ಡ್ (New Ration Card) ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದೀರಾ..? ಹಾಗಿದ್ದರೆ ಈ ಲೇಖನ ನಿಮಗಾಗಿ. ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಓದಿರಿ.
ಪಡಿತರ ಚೀಟಿಯನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ಸರ್ಕಾರವು ನೀಡುತ್ತದೆ. ರೇಷನ್ ಕಾರ್ಡ್ ಹೊಂದಿರದ ಫಲಾನುಭವಿಗಳಿಗೆ ಉಚಿತವಾಗಿ ಪಡಿತರವನ್ನು ನೀಡುತ್ತಾರೆ. ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈಗ ಮತ್ತೆ ಅವಕಾಶ ನೀಡಲಾಗಿದೆ. ಅರ್ಹರು ಅರ್ಜಿ ಸಲ್ಲಿಸಬಹುದು.
ಈ ಕುರಿತಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವರಾದ ಮುನಿಯಪ್ಪ ಮಾಹಿತಿ ನೀಡಿದ್ದು, ಈಗಾಗಲೇ ಪಡಿತರ ಚೀಟಿಗಳ ಅರ್ಜಿಯನ್ನು ಪರಿಶೀಲನೆ ಮಾಡಲಾಗುತ್ತಿದ್ದು, ಹೊಸ ರೇಷನ್ ಕಾರ್ಡ್ ಗಳ ವಿತರಣೆಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಮಾಡಲಾಗುತ್ತದೆ.
ಅರ್ಹ ಫಲಾನುಭವಿಗಳಿಗೆ ಹೊಸ ಪಡಿತರ (New Ration Card) ಚೀಟಿಗಳ ವಿತರಣೆಯಾದ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಸೆಪ್ಟೆಂಬರ್ 15 ರಿಂದ 30 ನೇ ತಾರೀಖಿನ ಒಳಗಾಗಿ ಯಾವುದಾದರೂ ಒಂದು ದಿನ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಹೇಳಿದ್ದಾರೆ.
ಹೊಸ BPL ಕಾರ್ಡ್ ಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
- ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
- ರೇಷನ್ ಕಾರ್ಡ್ ಇಲ್ಲದವರು ಅರ್ಜಿ ಸಲ್ಲಿಸಬಹುದು.
- ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು.
- ಕುಟುಂಬದ ವಾರ್ಷಿಕ ಆದಾಯದ ಮೇಲೆ ರೇಷನ್ ಕಾರ್ಡ್ ಅನ್ನು BPL ಹಾಗೂ APL ಎಂಬುದು ನಿರ್ಧರಿತವಾಗಿರಲಿದೆ.
New Ration Card ಅಗತ್ಯ ದಾಖಲೆಗಳು:
- ಆಧಾರ್ ಕಾರ್ಡ್
- ವೋಟರ್ ಐಡಿ
- ಮೊಬೈಲ್ ನಂಬರ್
- ವಯಸ್ಸಿನ ಪ್ರಮಾಣ ಪತ್ರ
- ಇತ್ತೀಚಿನ ಪಾರ್ಸ್ ಪೋರ್ಟ್ ಗಾತ್ರದ ಪೋಟೋ
- ಸ್ವಯಂ ಘೋಷಿತ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವುದು ಹೇಗೆ..?
ಅರ್ಜಿದಾರರು ತಮ್ಮ ಹತ್ತಿರದ CSC ಕೇಂದ್ರ ಅಥವಾ ಗ್ರಾಮ್ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇತರೆ ಮಾಹಿತಿಗಳನ್ನು ಓದಿ: