ವಿದ್ಯಾರ್ಥಿಗಳಿಗೆ 20,000 ರೂ. ವಿದ್ಯಾರ್ಥಿ ವೇತನ, ಅರ್ಜಿ ಆಹ್ವಾನ |‌ Karnataka Labour Card Scholarship 2023-24 Application, Last Date

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ನೀವು ಸರ್ಕಾರದಿಂದ ಶೈಕ್ಷಣಿಕ ಪ್ರೋತ್ಸಾಹ ಧನ ಪಡೆಯಬೇಕೆ? ಹಾಗಿದ್ದರೆ ಈ ಲೇಖನವನ್ನು ಒಮ್ಮೆ ಓದಿ. ಕರ್ನಾಟಕ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ನೇರವಾಗಲು ಹಾಗೂ ಉತ್ತಮವಾದ ಶೈಕ್ಷಣಿಕ ಜೀವನಕ್ಕಾಗಿ ಸರ್ಕಾರವು ಪ್ರೋತ್ಸಾಹ ಧನವನ್ನು (Labour Card Scholarship) ನೀಡುತ್ತಿದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.

ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಯಾರು ಅರ್ಹರು, ಯಾವೇಲ್ಲಾ ದಾಖಲೆಗಳು ಬೇಕಾಗುತ್ತವೆ, ಅರ್ಜಿ ಸಲ್ಲಿಕೆ ವಿಧಾನ, ಸರ್ಕಾರದಿಂದ ಎಷ್ಟು ಪ್ರೋತ್ಸಾಹ ಧನ ನೀಡುತ್ತಾರೆ ಹಾಗೂ ಮುಂತಾದ ವಿವರಗಳನ್ನು ಈ ಲೇಖನದಲ್ಲಿ ನೀಡಿದ್ದೆವೆ. ಸಂಪೂರ್ಣವಾಗಿ ಓದಿ ಸರ್ಕಾರದ ಯೋಜನೆಯ ಸೌಲಭ್ಯವನ್ನು ಪಡೆಯಬಹುದು.

Labour Card Scholarship 2024 ಮಾಹಿತಿ:

ಯೋಜನೆ ಹೆಸರು: ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ
ಪ್ರೋತ್ಸಾಹ ಧನ: ರೂ.6,000 ರಿಂದ ರೂ.20,000 ವರೆಗೆ
ಯಾರು ಅರ್ಹರು: ಪ್ರೌಢಶಾಲೆ, ಪಿಯುಸಿ/ಡಿಪ್ಲೊಮಾ/ಐಟಿಐ, ಪದವಿ, ಸ್ನಾತಕೋತ್ತರ ಪದವಿ, ಇಂಜಿನೀಯರಿಂಗ್/ವೈದ್ಯಕೀಯ ಓದುತ್ತಿರುವ ವಿದ್ಯಾರ್ಥಿಗಳು.

Labour Welfare Board Scholarship 2023-24
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ ಅಥವಾ ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2023-24 ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಪಡೆಯಲು ಆನ್‌ಲೈನ್‌ ಮುಖಾಂತರ ಅರ್ಜಿ ಆಹ್ವಾನ ಮಾಡಲಾಗಿದೆ.

ಕಾರ್ಮಿಕರ ಮಾಸಿಕ ವೇತವು 35,000 ರೂ. ಮೀರಿರಬಾರದು. ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯವನ್ನು ನೀಡಲಾಗುತ್ತದೆ ಎಂದು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯವನ್ನು ಪಡೆಯಬೇಕೆನ್ನುವ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು.

KLWBAPPS Scholarship 2024 ಅರ್ಹತೆ:

  • ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.
  • ಹಿಂದಿನ ತರಗತಿಯಲ್ಲಿ ಸಾಮಾನ್ಯ ವರ್ಗದ ವಿದ್ಯಾರ್ಥಿಯು ಶೇ.50 ಅಂಕಗಳನ್ನು ಹಾಗೂ ಪ.ಜಾ/ಪ.ಪಂ ವಿದ್ಯಾರ್ಥಿಯು 45 ರಷ್ಟು ಅಂಕಗಳನ್ನು ಪಡೆದು ಪಾಸಾಗಿರಬೇಕು.

ಶೈಕ್ಷಣಿಕ ಪ್ರೋತ್ಸಾಹ ಧನ ಮೊತ್ತ:

  • ವಿವಿಧ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಕೇಳಗಿನಂತೆ Educational Assistance ಮೊತ್ತ ನೀಡುತ್ತಾರೆ.
  • ಪ್ರೌಢಶಾಲೆಯ 8ನೇ ತರಗತಿ ಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ 6,000 ರೂ. ಪ್ರೋತ್ಸಾಹ ಧನ
  • ಪಿಯುಸಿ, ಡಿಪ್ಲೊಮಾ, ಐಟಿಐ, ಟಿಸಿಹೆಚ್ ಇತ್ಯಾದಿ ವಿದ್ಯಾರ್ಥಿಗಳಿಗೆ 8,000 ರೂ.
  • ಪದವಿ ವಿದ್ಯಾರ್ಥಿಗಳಿಗೆ 10,000 ರೂ.
  • ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 12,000 ರೂ.
  • ಇಂಜಿನೀಯರಿಂಗ್, ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಗೆ 20,000 ರೂ. ಗಳ ಪ್ರೋತ್ಸಾಹ ಧನ.

Labour Card Scholarship 2023-24 Last Date:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-01-2024

Labour Department Scholarship 2023 ಪ್ರಮುಖ ಲಿಂಕ್‌ಗಳು:
Labour Card Scholarship ಅರ್ಜಿ ಸಲ್ಲಿಕೆ ಲಿಂಕ್:‌
Apply ಮಾಡಿ
ಅಧಿಕೃತ ವೆಬ್‌ಸೈಟ್‌ಗಳು: klwbapps.karnataka.gov.in, klwb.karnataka.gov.in

ಹೆಚ್ಚಿನ ಮಾಹಿತಿಗಾಗಿ: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತೀಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂರವಾಣಿ 080-23475188, 8277291175, 8277120505. 9141585402, 9141602562 ಮೂಲಕ ಸಂಪರ್ಕಿಸಬಹುದು.

ಇತರೆ ಮಾಹಿತಿಗಳನ್ನು ಓದಿ

ಕಾರ್ಮಿಕರಿಗೆ ಸಿಹಿ ಸುದ್ದಿ: ಲೇಬರ್‌ ಕಾರ್ಡ್‌ ನೋಂದಣಿ ಶುರು

ಯುವ ನಿಧಿ ಅರ್ಜಿ ಸಲ್ಲಿಸಿ, 3000 ರೂ. ಪಡೆಯಿರಿ

ಗೃಹಲಕ್ಷ್ಮಿ ಯೋಜನೆ: ಈ ಕಂತಿನ ಹಣ ನಿಮಗೆ ಬಂತಾ..?

Leave a Comment