HSRP Number Plate: ವಾಹನ ಸವಾರರಿಗೆ ಗುಡ್ ನ್ಯೂಸ್, ಸಾರಿಗೆ ಇಲಾಖೆಯಿಂದ ಸದ್ಯಕ್ಕಿಲ್ಲ ದಂಡ

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರದಿಂದ ವಾಹನ ಸವಾರರಿಗೆ ಗುಡ್ ನ್ಯೂಸ್. ನಿಮ್ಮ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್‌ ಪ್ಲೇಟ್‌ (HSRP Number Plate) ಅಳವಡಿಸಿಕೊಂಡಿಲ್ಲವೆ..? ಹಾಗಿದ್ದರೆ ಚಿಂತೆ ಬಿಡಿ. ಈ ಲೇಖನ ನೀಮಗಾಗಿ.

ವಾಹನಗಳ ಸುರಕ್ಷತೆಯ ದೃಷ್ಟಿಯಿಂದ HSRP ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಳ್ಳಲು ಸರ್ಕಾರ ತಿಳಿಸಿದೆ. ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ಸೆಪ್ಟೆಂಬರ್‌ 18 ರಂದು ವಿಚಾರಣೆ ನಡೆಯಲಿದ್ದು, ಅಲ್ಲಿಯವರೆಗೆ ವಾಹನ ಸವಾರರಿಗೆ ಯಾವುದೇ ದಂಡ ವಿಧಿಸದಿರಲು ಸಾರಿಗೆ ಇಲಾಖೆ ತೀರ್ಮಾನಿಸಿದೆ.

HSRP Number Plate Karnataka:

HSRP ನಂಬರ್ ಪ್ಲೇಟ್ ಅಳವಡಿಕೆಯ ಮೂರು ತಿಂಗಳ ಅವಧಿ ಈಗ ಮುಗಿದಿದೆ. ಸೆಪ್ಟೆಂಬರ್‌ 18ಕ್ಕೆ ಹೈಕೋರ್ಟ್‌ ನೀಡುವ ಆದೇಶ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಯಾವುದೇ ಬಲವಂತದ ಕ್ರಮ ಇರುವುದಿಲ್ಲ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸದಿದ್ದರೆ ಸೆಪ್ಟೆಂಬರ್ 16 ರಿಂದ ದಂಡ ವಿಧಿಸಲಾಗುವುದು ಎಂದು ತಿಳಿಸಲಾಗಿತ್ತು. ಆದರೆ ಈ ವಿಷಯಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 18 ರಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಸದ್ಯಕ್ಕೆ ಸಾರಿಗೆ ಇಲಾಖೆಯ ಅಧಿಕಾರಿಗಳು ಯಾವುದೇ ದಂಡ ವಿಧಿಸುವ ಬಗ್ಗೆ ತೀರ್ಮಾನಿಸಿಲ್ಲ.

ಈ ವಿಷಯಕ್ಕೆ ಸಂಬಂಧಿಸಿದ ವಿಚಾರಣೆಯ ನಂತರ ದಂಡ ವಿಧಿಸಬೇಕೆ ಅಥವಾ ಗಡುವು ವಿಸ್ತರಣೆ ಮಾಡಬೇಕೆ ಎನ್ನುವ ನಿರ್ಧಾರ ಕೈಗೊಳ್ಳಲಾಗುವುದು. 2019ರ ಏಪ್ರಿಲ್ 1 ಕ್ಕಿಂತ ಮೊದಲು ನೋಂದಣಿಯಾದ ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದೆ.

ಕರ್ನಾಟಕ ರಾಜ್ಯದಲ್ಲಿ ಇನ್ನೂ ಸುಮಾರು 1 ಕೋಟಿ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಿದೆ. ಆದ್ದರಿಂದ ಸಾರಿಗೆ ಇಲಾಖೆಯು ಗಡುವು ವಿಸ್ತರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇತರೆ ಮಾಹಿತಿಗಳನ್ನು ಓದಿ:

ಗೃಹಲಕ್ಷ್ಮೀ ಯೋಜನೆ DBT Status ಚೆಕ್ ಮಾಡಿ

ಮಹಿಳೆಯರಿಗೆ ಗುಡ್‌ ನ್ಯೂಸ್:‌ ಸರ್ಕಾರದಿಂದ 3 ಲಕ್ಷ ರೂ. ಸಹಾಯಧನ

ಉಚಿತ ಬೋರ್‌ವೇಲ್: ಗಂಗಾ ಕಲ್ಯಾಣ ಯೋಜನೆಗಾಗಿ ಅರ್ಜಿ ಆಹ್ವಾನ

ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ

Leave a Comment