Anna Bhagya Yojane: ರೇಷನ್ ಕಾರ್ಡ್ ಫಲಾನುಭವಿಗಳಿಗೆ ಗುಡ್ ನ್ಯೂಸ್

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಗುಡ್ ನ್ಯೂಸ್. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯು (Anna Bhagya Yojane) ಒಂದಾಗಿದೆ. ಬಡತನ ರೇಖೆಗಿಂತ ಕೆಳಗಿರುವವರಿಗೆ ರೇಷನ್ ಕಾರ್ಡ್ ನೀಡಲಾಗುತ್ತದೆ. ಸರ್ಕಾರವು ನೀಡುತ್ತಿರುವ ಯೋಜನೆಗಳ ಲಾಭ ಪಡೆದುಕೊಳ್ಳಬೇಕಾದರೆ ನಿಮ್ಮ ಬಳಿ ರೇಷನ್ ಇರಬೇಕಾಗುತ್ತದೆ.

ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ BPL ಕಾರ್ಡ್ ಹೊಂದಿರುವವರಿಗೆ ಉಚಿತವಾಗಿ ಪಡಿತರವನ್ನು ನೀಡಲಾಗುತ್ತದೆ. ರಾಜ್ಯ ಸರ್ಕಾರವು 5kg ಅಕ್ಕಿ ಹಾಗೂ ಉಳಿದ 5 kg ಅಕ್ಕಿಯ ಬದಲಿಗೆ DBT ಮೂಲಕ kg ಗೆ 34 ರೂ. ಅಂತೆ 5kg ಗೆ 170 ರೂ. ಅನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ.

Anna Bhagya Yojane Update:

ಅನ್ನಭಾಗ್ಯ ಯೋಜನೆಯು ಜಾರಿಯಾದಾಗ ರೇಷನ್ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ತಲಾ 10kg ಅಕ್ಕಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಆದರೆ, ರಾಜ್ಯ ಸರ್ಕಾರದಿಂದ 10kg ಅಕ್ಕಿ ನೀಡಲು ಅಗತ್ಯ ದಾಸ್ತಾನು ಇರಲಿಲ್ಲ. ಆಗ ರಾಜ್ಯ ಸರ್ಕಾರವು ಕೇಂದ್ರಕ್ಕೆ ಅಕ್ಕಿ ನೀಡುವಂತೆ ಕೇಳಿದ್ದರು. ಆದರೆ ಕೇಂದ್ರ ಸರ್ಕಾರವು ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು. ನಂತರ ರಾಜ್ಯ ಸರ್ಕಾರ 5kg ಅಕ್ಕಿ ಕೊಟ್ಟು ಉಳಿದ 5Kg ಅಕ್ಕಿಯ ಹಣ ನೀಡುವುದಾಗಿ ಘೋಷಿಸಿತ್ತು.

ಕಳೆದ ವರ್ಷ ಅನ್ನಭಾಗ್ಯ ಯೋಜನೆ ಜಾರಿಯಾದಾಗ ಪಡಿತರದಾರರಿಗೆ ತಲಾ ಹತ್ತು ಕೆ.ಜಿ ಅಕ್ಕಿ ಘೋಷಿಸುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಆದರೆ, ರಾಜ್ಯದಿಂದಲೇ ಹತ್ತೂ ಕೆ.ಜಿ ಅಕ್ಕಿ ನೀಡಲು ಅಗತ್ಯ ದಾಸ್ತಾನು ಇರಲಿಲ್ಲ. ಹೀಗಾಗಿ ಅಕ್ಕಿ ನೀಡುವಂತೆ ರಾಜ್ಯ ಸರ್ಕಾರವು ಕೇಂದ್ರದ ಮೊರೆ ಹೋಗಿತ್ತು. ಇದಕ್ಕೆ ಹೆಚ್ಚುವರಿ ಹಣ ನೀಡುವುದಾಗಿಯೂ ಕಾಂಗ್ರೆಸ್‌ ಸರ್ಕಾರ ಹೇಳಿತ್ತು. ಆದರೆ, ಕೇಂದ್ರ ಸರ್ಕಾರವು ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ಇದಾದ ಬಳಿಕ ಕೇವಲ ಐದು ಕೆ.ಜಿ ಅಕ್ಕಿಯನ್ನಷ್ಟೇ ರಾಜ್ಯ ಸರ್ಕಾರ ನೀಡಲು ನಿರ್ಧರಿಸಿ, ಬಾಕಿ ಅಕ್ಕಿಗೆ ಹಣ ನೀಡುವ ಘೋಷಿಸಿತ್ತು.

ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು ಕೇಂದ್ರ ಸರ್ಕಾರವು ರಾಜ್ಯಕ್ಕೆ ಅಕ್ಕಿ ನೀಡಲು ಒಪ್ಪಿಗೆ ಸೂಚಿಸಿದ್ದರಿಂದ ಇನ್ನು ಮುಂದೆ ಅನ್ನಭಾಗ್ಯ ಯೋಜನೆಯ ಹಣದ ಬದಲಿಗೆ ಅಕ್ಕಿ ನೀಡಲಾಗುತ್ತದೆ ಎಂದು ಆಹಾರ ಸಚಿವರಾದ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.

BPL ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಆದಷ್ಟು ಬೇಗ ಅಕ್ಕಿ ನೀಡಲಾಗುತ್ತದೆ. ಈ ಹಿಂದೆ DBT ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿತ್ತು. ಆದರೆ ಈಗ ಹಣದ ಬದಲಿಗೆ ಜನರಿಗೆ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದಾರೆ.

ಇತರೆ ಮಾಹಿತಿಗಳನ್ನು ಓದಿ:

ಗೃಹಲಕ್ಷ್ಮೀ ಯೋಜನೆ DBT Status ಚೆಕ್ ಮಾಡಿ

ಮಹಿಳೆಯರಿಗೆ ಗುಡ್‌ ನ್ಯೂಸ್:‌ ಸರ್ಕಾರದಿಂದ 3 ಲಕ್ಷ ರೂ. ಸಹಾಯಧನ

ಉಚಿತ ಬೋರ್‌ವೇಲ್: ಗಂಗಾ ಕಲ್ಯಾಣ ಯೋಜನೆಗಾಗಿ ಅರ್ಜಿ ಆಹ್ವಾನ

ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ

Leave a Comment