ಲೇಬರ್ ಕಾರ್ಡ್ ವಿದ್ಯಾರ್ಥಿವೇತನ 2024 | Labour Card Scholarship 2024 Apply Online

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ನೀವು ಕೂಡ ರಾಜ್ಯ ಸರ್ಕಾರವು ನೀಡುತ್ತಿರುವ ವಿದ್ಯಾರ್ಥಿವೇತನ ಪಡೆಯಬೇಕೆ..? ಯಾರು ಈ ಶೈಕ್ಷಣಿಕ ಧನಸಹಾಯಕ್ಕೆ (Labour Card Scholarship) ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.

ರಾಜ್ಯ ಸರ್ಕಾರವು ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದೆ. 2024-25 ನೇ ಸಾಲಿನ ಅರ್ಹ ನೋಂದಾಯಿತ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕಾರ್ಮಿಕ ಇಲಾಖೆಯ ವತಿಯಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Labour Card Scholarship 2024:

ಅರ್ಹ ಮತ್ತು ಆಸಕ್ತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಲು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (SSP Website) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಹ ಕಾರ್ಮಿಕರ ಮಕ್ಕಳು ಶೈಕ್ಷಣಿಕ ಧನಸಹಾಯವನ್ನು SSP ವೆಬ್‌ಸೈಟ್‌ ಮೂಲಕ ಪಡೆಯಲು kbocwwb.Karnataka.gov.in ಮಂಡಳಿಯ ವೆಬ್‌ಸೈಟ್‌ ನಲ್ಲಿ ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ, ಆಧಾ‌ರ್ ಲಿಂಕ್ (ಸೀಡ್) ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

SSP ವೆಬ್‌ಸೈಟ್‌ ಮೂಲಕ ಶೈಕ್ಷಣಿಕ ಧನಸಹಾಯ ಪಡೆಯಲು ಆಧಾರ್ ಸಂಖ್ಯೆಯನ್ನು ಲಿಂಕ್(ಸೀಡ್) ಮಾಡದೇ ಇರುವ ಎಲ್ಲಾ ಕಾರ್ಮಿಕರು ಕೂಡಲೇ ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ನೋಂದಣಿ ಮಾಡಿ ಎನ್ ಪಿ ಸಿ ಐ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು.

2024-25ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಮೀಸಲಿಟ್ಟಿರುವ ಅಯವ್ಯಯಕ್ಕೆ ಅನುಗುಣವಾಗಿ ಶೈಕ್ಷಣಿಕ ಧನಸಹಾಯಕ್ಕೆ (Labour Card Scholarship) ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಧನಸಹಾಯ ವಿತರಿಸಲಾಗುವುದೆಂದು ಎಂದು ಮಂಡಳಿಯು ತಿಳಿಸಿದೆ.

2024-25 ನೇ ಸಾಲಿಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ವಿವಿಧ ಇಲಾಖೆಗಳಲ್ಲಿ SSP ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 31-12-2024

Labour Department Scholarship 2024 ಪ್ರಮುಖ ಲಿಂಕ್‌ಗಳು:

ಅರ್ಜಿ ಸಲ್ಲಿಕೆ ಲಿಂಕ್:‌ Apply ಮಾಡಿ
ಆಧಾ‌ರ್ ಲಿಂಕ್ (ಸೀಡ್): Click Here
ಅಧಿಕೃತ ವೆಬ್‌ಸೈಟ್‌ಗಳು: kbocwwb.Karnataka.gov.in, ssp.karnataka.gov.in

ವಿದ್ಯಾನಿಧಿ ಯೋಜನೆ: ಸರ್ಕಾರದಿಂದ ಹೊಸ ವಿದ್ಯಾರ್ಥಿವೇತನ

SSP Scholarship 2024 For OBC

ಸಂತೂರ್ ವಿದ್ಯಾರ್ಥಿವೇತನ 2024

SSP ಮೆಟ್ರಿಕ್ ನಂತರ ಶುಲ್ಕ ಮರುಪಾವತಿ ಯೋಜನೆ

Leave a Comment