ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯ (GruhaLakshmi Scheme) ಫಲಾನುಭವಿಗಳಿಗೆ ಗುಡ್ ನ್ಯೂಸ್, ಜುಲೈ ಮತ್ತು ಆಗಸ್ಟ್ ತಿಂಗಳಿನ ಹಣವು ಯಾವಾಗ ನಿಮ್ಮ ಖಾತೆಗೆ ಜಮಾ ಆಗಲಿದೆ ಎಂದು ಕಾಯುತ್ತಿದ್ದೀರಾ..? ಹಾಗಿದ್ದರೆ ಚಿಂತೆ ಬಿಡಿ ಈ ಲೇಖನದಲ್ಲಿ ಮಾಹಿತಿ ನೀಡಲಿದ್ದೇವೆ ಓದಿರಿ.
ಈ ಯೋಜನೆಯನ್ನು ಮಹಿಳೆಯರು ಸಭಲೀಕರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಕೋಟಿಗೂ ಅಧಿಕ ಮಹಿಳೆಯರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿ ಲಾಭ ಪಡೆದುಕೊಂಡಿದ್ದಾರೆ. ಇಲ್ಲಿಯವರೆಗೆ ಗೃಹಲಕ್ಷ್ಮೀ ಯೋಜನೆಯ 11 ಕಂತುಗಳ 22,000 ರೂ. ಅರ್ಹ ಮನೆ ಯಜಮಾನಿಯರ ಖಾತೆಗೆ ಸಂದಾಯವಾಗಿದೆ.
ದಸರಾ ಹಬ್ಬಕ್ಕೆ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. 12 ಮತ್ತು 13 ನೇ ಕಂತಿನ ಹಣವು ಯಾವಾಗ ಯಜಮಾನಿಯರ ಖಾತೆ ಸೇರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಾಹಿತಿ ನೀಡಿದ್ದಾರೆ.
GruhaLakshmi Scheme Amount Credit Date:
ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವು ತಾಂತ್ರಿಕ ಕಾರಣಗಳಿಂದ ಫಲಾನುಭವಿಗಳ ಖಾತೆಗೆ ಸಂದಾಯವಾಗಿಲ್ಲ. ಇದೇ ತಿಂಗಳ 7 ಮತ್ತು 9 ನೇ ತಾರೀಖಿನಂದು ಮನೆಯಜಮಾನಿಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವು ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆಯಾದ ಲಕ್ಷ್ಮೀ ಹೆಬ್ಬಾಳಕರ್ ಅವರು ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಅರ್ಹ ಮನೆ ಯಜಮಾನಿಯರ ಬ್ಯಾಂಕ್ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ ಹಾಕುವುದು ವಿಳಂಬವಾಗಿತ್ತು. ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಗೃಹಲಕ್ಷ್ಮೀ ಯೋಜನೆಗೆ (GruhaLakshmi Scheme) ಅರ್ಜಿ ಸಲ್ಲಿಸಿದರು ಯಾರಿಗೆ ಹಣ ಸಂದಾಯವಾಗಿಲ್ಲ ಅಂತವರು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ ಲಿಂಕ್ ಅಗಿದೇಯಾ ಎಂಬುದನ್ನು ಚೆಕ್ ಮಾಡಿಸಿಕೊಳ್ಳಿ. ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ಗಳಲ್ಲಿ ಪರಿಹರಿಸಿಕೊಳ್ಳಬೇಕು. ಈ ಸಮಸ್ಯೆಗಳನ್ನು ಪರಿಹರಿಸಿಕೊಂಡಲ್ಲಿ ನಿಮಗೆ ಗೃಹಲಕ್ಷ್ಮೀ ಯೋಜನೆಯ ಹಣವು ನಿಮ್ಮ ಖಾತೆಗೆ ಜಮಾ ಆಗುತ್ತದೆ.
ಇತರೆ ಮಾಹಿತಿಗಳನ್ನು ಓದಿ: