PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18 ನೇ ಕಂತಿನ 2,000 ರೂ. ಹಣ ಜಮಾ ನಾಳೆ | PM Kisan 18th Installment of ₹2,000 to be Credited Tomorrow

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಕೇಂದ್ರ ಸರ್ಕಾರವು ರೈತರಿಗೆ ಗುಡ್ ನ್ಯೂಸ್ ನೀಡಿದೆ, PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18 ನೇ ಕಂತಿನ ಹಣವನ್ನು (PM Kisan 18th Installment) ಯಾವಾಗ ಮಾಡಲಿದ್ದಾರೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.

ಈ ಯೋಜನೆಯನ್ನು ಕೇಂದ್ರ ಸರ್ಕಾರ ರೈತರಿಗಾಗಿಯೇ ಜಾರಿಗೆ ತಂದಿದೆ. ಇದುವರೆಗೂ ಕೋಟ್ಯಾಂತರ ರೈತರು PM ಕಿಸಾನ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಿ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ.

PM Kisan 18th Installment Credited Tomorrow:

ಪಿಎಂ ಕಿಸಾನ ಯೋಜನೆಯಗೆ ಅರ್ಜಿ ಸಲ್ಲಿಸಿದ ರೈತರಿಗೆ ವಾರ್ಷಿಕವಾಗಿ 6,000 ರೂ. ಗಳನ್ನು ಅವರ ಖಾತೆಗೆ ನೇರವಾಗಿ ಸಂದಾಯ ಮಾಡಲಾಗುತ್ತದೆ. ಪ್ರತಿ 4 ತಿಂಗಳಿಗೊಮ್ಮೆ 2,000 ರೂ. ಅಂತೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ.

2024 ರ ಜೂನ್ 18 ರಂದು PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತಿನ ಹಣವು ಅರ್ಹ ರೈತರ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ಇನ್ನು 18 ನೇ ಕಂತಿನ ಹಣವನ್ನು ಅಕ್ಟೋಬರ್ 05 ರಂದು ಅಪರಾಹ್ನ 12 ಗಂಟೆಗೆ ಗೌರವಾನ್ವಿತ ಪ್ರಧಾನ ಮಂತ್ರಿಗಳು ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಹಣವನ್ನು (PM Kisan 18th Installment) ಮಹಾರಾಷ್ಟ್ರದ ವಾಷಿಂ ನಿಂದ ಬಿಡುಗಡೆ ಮಾಡಲಿದ್ದಾರೆ.

ಇದುವರೆಗೂ ಯಾರು PM ಕಿಸಾನ್ ಯೋಜನೆಗೆ eKYC ಮಾಡಿಸಿಕೊಂಡಿರುವುದಿಲ್ಲ ಅಂವರು ಕೂಡಲೇ ಇ-ಕೆವೈಸಿ ಮಾಡಿಸಿಕೊಳ್ಳಿ. ತದನಂತರ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್‌ ಲಿಂಕ್ ಆಗಿದೆಯಾ ಎಂಬುದನ್ನು ಚೆಕ್ ಮಾಡಿಸಿಕೊಳ್ಳಿ. ಒಂದುವೇಳೆ ಆಧಾರ್ ಲಿಂಕ್ ಆಗದಿದ್ದರೆ ಕೂಡಲೇ ಲಿಂಕ ಮಾಡಿಸಿಕೊಳ್ಳಬೇಕು‌.

PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯ eKYC ಅನ್ನು ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್‌ ನಲ್ಲಿ ಕೆವೈಸಿ ಮಾಡಿಕೊಳ್ಳಬಹುದು. ಅಥವಾ ನಿಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರದಲ್ಲಿ (CSC) ಭೇಟಿ ನೀಡಿ eKYC ಮಾಡಿಸಿಕೊಳ್ಳಬಹುದು.

ಇ-ಕೆವೈಸಿ ಹಾಗೂ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್‌ ಲಿಂಕ್ ಆಗದೆ ಇದ್ದರೆ PM ಕಿಸಾನ್ ಯೋಜನೆಯ 18 ನೇ ಕಂತಿನ ಹಣವು ನಿಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗುದಿಲ್ಲ. ಆದ್ದರಿಂದ ಕೂಡಲೇ eKYC ಮಾಡಿಸಿಕೊಳ್ಳಿ.

ಇತರೆ ಮಾಹಿತಿಗಳನ್ನು ಓದಿ:

ಎರಡೂ ಕಂತಿನ 4,000 ರೂ. ಹಣ ಈ ದಿನ ಜಮಾ: ಸಚಿವೆ ಹೆಬ್ಬಾಳಕರ್

ಗೃಹಲಕ್ಷ್ಮೀ ಯೋಜನೆ DBT Status ಚೆಕ್ ಮಾಡಿ

ಉಚಿತ ಹೊಲಿಗೆ ಯಂತ್ರ ಯೋಜನೆ 2024

Leave a Comment