KSRTC Speacial Bus: ದಸರಾ ಹಬ್ಬಕ್ಕೆ ವಿಶೇಷ ಬಸ್‌ ವ್ಯವಸ್ಥೆ

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ದಸರಾ ಹಬ್ಬದ ಪ್ರಯುಕ್ತ KSRTC ಯು 2,000 ಕ್ಕೂ ಹೆಚ್ಚು ವಿಶೇಷ ಬಸ್‌ಗಳನ್ನು ವ್ಯವಸ್ಥೆ (KSRTC Speacial Bus) ಮಾಡಲು ನಿರ್ಧರಿಸಿದೆ. ಅಕ್ಟೋಬರ್‌ 9 ರಿಂದ 12ರ ವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹಾಗೂ ಅಕ್ಟೋಬರ್‌ 13 ಮತ್ತು 14 ರಂದು ವಿವಿಧ ಪ್ರದೇಶಗಳಿಂದ ಬೆಂಗಳೂರಿಗೆ ಈ ವಿಶೇಷ ಬಸ್‌ಗಳ ಸಂಚಾರ ಇರಲಿದೆ.

ಕರ್ನಾಟಕ ಸಾರಿಗೆ (ವೇಗದೂತ), ಐರಾವತ, ರಾಜಹಂಸ, ಸ್ಲೀಪರ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಇ.ವಿ ಪವರ್ ಪ್ಲಸ್, ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‌ಗಳ ಸಂಚಾರ ಇರಲಿದೆ ಎಂದು KSRTC ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಧರ್ಮಸ್ಥಳ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಹ್ಮಣ್ಯ, ಗೋಕರ್ಣ, ಕೊಲ್ಲೂರು, ಹಾಗೂ ವಿವಿದ ಜಿಲ್ಲಾ ಕೇಂದ್ರಗಳು ಹಾಗೂ ನೆರೆಯ ರಾಜ್ಯಗಳಾದ ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಹೈದರಾಬಾದ್, ಪುದುಕೋಟೆ, ಪಣಜಿ, ಶಿರಡಿ, ಪುಣೆ, ಎರ್ನಾಕುಲಂ, ಪಾಲ್‌ಘಾಟ್, ಮಧುರೈ, ಹಾಗೂ ಇತರ ಸ್ಥಳಗಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಇರಲಿದೆ.

660 ವಿಶೇಷ ಬಸ್‌ ವ್ಯವಸ್ಥೆ:
ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 260 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಇರಲಿದೆ.

ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಶ್ರೀರಂಗಪಟ್ಟಣ, ನಂಜನಗೂಡು, ಕೆ.ಆರ್.ಎಸ್. ಅಣೆಕಟ್ಟು ಸೇರಿದಂತೆ, ಹುಣಸೂರು, ಕೆ.ಆರ್.ನಗರ, ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್.ಡಿ.ಕೋಟೆ, ಚಾಮರಾಜನಗರ, ಗುಂಡ್ಲುಪೇಟೆಗೂ ಸಾರಿಗೆ ವ್ಯವಸ್ಥೆ ಕಲ್ಪಿಸಲು 400 ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ

ಈ ಮೇಲಿನ ಸ್ಥಳಗಳಿಗೆ ಹೊಗಬಯಸುವ ಪ್ರಯಾಣಿಕರು www.ksrtc.karnataka.gov.in ವೆಬ್‌ಸೈಟ್ ಮೂಲಕ ಅಥವಾ ಮೊಬೈಲ್ ಮೂಲಕ ಇ-ಟಿಕೆಟ್‌ ಕಾಯ್ದಿರಿಸಬಹುದು.

ಇತರೆ ಮಾಹಿತಿಗಳನ್ನು ಓದಿ:

ಎರಡೂ ಕಂತಿನ 4,000 ರೂ. ಹಣ ಈ ದಿನ ಜಮಾ: ಸಚಿವೆ ಹೆಬ್ಬಾಳಕರ್

ಗೃಹಲಕ್ಷ್ಮೀ ಯೋಜನೆ DBT Status ಚೆಕ್ ಮಾಡಿ

ಉಚಿತ ಹೊಲಿಗೆ ಯಂತ್ರ ಯೋಜನೆ 2024

ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ

Leave a Comment