Anna Bhagya DBT: ಅನ್ನಭಾಗ್ಯ ಯೋಜನೆಯ DBT ಹಣ ಪ್ರತಿ ತಿಂಗಳು ಈ ದಿನ ಜಮಾ: ಸಚಿವ ವಿ.ಮುನಿಯಪ್ಪ

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ರೇಷನ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಗುಡ್ ನ್ಯೂಸ್, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯು (Anna Bhagya DBT) ಒಂದಾಗಿದೆ‌. ಈ ಯೋಜನೆಯ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವವರಿಗೆ ಸರ್ಕಾರ ರೇಷನ್ ಕಾರ್ಡ್ ನೀಡುತ್ತದೆ. ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳು ಸರ್ಕಾರ ನೀಡುತ್ತಿರುವ ಯೋಜನೆಗಳ ಲಾಭ ಪಡೆದುಕೊಳ್ಳಬಹುದು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಪೂರ್ವದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಹೇಳಿದ್ದರು. ಅದರಂತೆ ಐದು ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಅದರಲ್ಲಿ ಅನ್ನಭಾಗ್ಯ ಯೋಜನೆಯ ಮೂಲಕ ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಉಚಿತವಾಗಿ ಪಡಿತರವನ್ನು ನೀಡುತ್ತಾರೆ‌.

Anna Bhagya DBT Amount:

BPL ಕಾರ್ಡ್‌ ಹೊಂದಿರುವ ಫಲಾನುಭವಿಗಳ ಕುಟುಂಬದ ಪ್ರತಿ ಸದಸ್ಯರಿಗೆ 5 KG ಅಕ್ಕಿ ಬದಲಿಗೆ ಅವರ ಖಾತೆಗೆ ಹಣ ವರ್ಗಾವಣೆ ಮಾಡುತ್ತಿದ್ದರು. ಪ್ರತಿ KG ಅಕ್ಕಿಗೆ ತಲಾ 34 ರೂ. ನಂತೆ 5KG ಅಕ್ಕಿಗೆ 170 ರೂ. ನೀಡಲಾಗುತ್ತಿತ್ತು. ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಆದರೆ ತಾಂತ್ರಿಕ ಕಾರಣದಿಂದ ಹಣವು ಫಲಾನುಭವಿಗಳ ಖಾತೆಗೆ ಸಂದಾಯವಾಗಿಲ್ಲ.

ಮಾಧ್ಯಮದವರೊಂದಿಗೆ ಮಾತನಾಡಿದ ಆಹಾರ ಸಚಿವರಾದ ವಿ.ಮುನಿಯಪ್ಪನವರು, ರಾಜ್ಯದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಅನ್ನಭಾಗ್ಯ ಯೋಜನೆಯ ಹಣ ಈವರೆಗೆ ಬಿಡುಗಡೆಯಾಗಿಲ್ಲ. ಈ ಹಣವನ್ನು ಪ್ರತಿ ತಿಂಗಳು 10 ನೇ ತಾರೀಖಿನಂದು ಬಿಡುಗಡೆ ಮಾಡಲಾಗುತ್ತಿತ್ತು. ಸರ್ವರ್ ಸಮಸ್ಯೆಯಿಂದ ಈಗ ಬಿಡುಗಡೆ ಮಾಡಲಾಗಿಲ್ಲ. ಮುಂದಿನ ವಾರ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.

ಬಡತನ ರೇಖೆಗಿಂತ ಕೆಳಗೆ ಇರುವವರಿಗೆ ರೇಷನ್ ಕಾರ್ಡ್ ಅನ್ನು ಸರ್ಕಾರ ನೀಡುತ್ತದೆ. ಆದರೆ ಅರ್ಹರಲ್ಲದವರೂ BPL ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲಿಸಲಾಗುತ್ತಿದೆ. ಅನ್ನ ಭಾಗ್ಯ ಯೋಜನೆಯ (Anna Bhagya DBT) ಹಣವು ಮುಂದಿನ ವಾರ ಫಲಾನುಭವಿಗಳಿಗೆ ಖಾತೆಗೆ ಸಂದಾಯವಾಗಲಿದೆ.

ಇತರೆ ಮಾಹಿತಿಗಳನ್ನು ಓದಿ:

ಗೃಹಲಕ್ಷ್ಮೀ ಯೋಜನೆ DBT Status ಚೆಕ್ ಮಾಡಿ

ಉಚಿತ ಹೊಲಿಗೆ ಯಂತ್ರ ಯೋಜನೆ 2024

ಗೃಹಲಕ್ಷ್ಮೀ ಯೋಜನೆಯ 12 ನೇ ಕಂತಿನ 2 ಸಾವಿರ ರೂ. ಜಮಾ

Ration Card e-KYC Karnataka

Leave a Comment