Apprenticeship Training: ಅಪ್ರೆಂಟಿಸ್ ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನ

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ನೀವು ಕೂಡ ಅಪ್ರೆಂಟಿಸ್ ತರಬೇತಿ ಅರ್ಜಿ ಸಲ್ಲಿಸಬೇಕೆ..? 2024-25 ನೇ ಸಾಲಿನ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ (Apprenticeship Training) ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿ, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.

ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಒಬ್ಬ ಅಭ್ಯರ್ಥಿಯನ್ನು ಹಾಗೂ ಪರಿಶಿಷ್ಟ ಪಂಗಡದ ಒಬ್ಬರನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತಿಂಗಳಿಗೆ ರೂ. 15,000 ಗಳ ಸ್ಟೈಫಂಡ್‌ ನೀಡಲಾಗುವುದು.

Apprenticeship Training ಅಗತ್ಯ ದಾಖಲೆಗಳು:

  • ಎಸ್.ಎಸ್.ಎಲ್.ಸಿ ಅಂಕಪಟ್ಟಿ,
  • ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ,
  • ಪಾಸ್‌ಪೋರ್ಟ್ ಅಳತೆಯ ಎರಡು ಭಾವಚಿತ್ರ,
  • ಕಂಪ್ಯೂಟರ್ ತರಬೇತಿ ಪ್ರಮಾಣ ಪತ್ರ

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು.

ಈ ಮೇಲಿನ ಎಲ್ಲಾ ದಾಖಲೆಗಳೊಂದಿಗೆ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ – ಪ್ರತಿಯಲ್ಲಿ ನವೆಂಬರ್ 15 ರೊಳಗಾಗಿ ಉಪನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ವಾರ್ತಾ ಸೌಧ, 2ನೇ ಮಹಡಿ, ನಂ.17, ಭಗವಾನ್ ಮಹಾವೀರ್ ರಸ್ತೆ, ಬೆಂಗಳೂರು- 560001, ಇವರಿಗೆ ಸಲ್ಲಿಸಬೇಕು.

ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ʼವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ (Apprenticeship Training) ಅರ್ಜಿʼ ಎಂದು ನಮೂದಿಸಬೇಕು.

ಅರ್ಹ ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-22028059, 9480841219 ಹಾಗೂ ಇ-ಮೇಲ್ – [email protected] ಅನ್ನು ಸಂರ್ಪಕಿಸಬಹುದು.

ಇತರೆ ಮಾಹಿತಿಗಳನ್ನು ಓದಿ:

ಗೃಹಲಕ್ಷ್ಮೀ ಯೋಜನೆ DBT Status ಚೆಕ್ ಮಾಡಿ

ಉಚಿತ ಹೊಲಿಗೆ ಯಂತ್ರ ಯೋಜನೆ 2024

Leave a Comment