ಎಲ್ಲರಿಗೂ ನಮಸ್ಕಾರ, ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್. ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ (Ayushman Bharat Insurance Scheme) ಯೋಜನೆಯಡಿಯಲ್ಲಿ 5 ಲಕ್ಷದ ವರೆಗೆ ಉಚಿತ ಚಿಕಿತ್ಸೆ ನೀಡುವ ಆರೋಗ್ಯ ವಿಮಾ ಸೌಲಭ್ಯವನ್ನು ಸರ್ಕಾರ ನೀಡುತ್ತದೆ.
ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ 5 ಲಕ್ಷ ರೂ. ವರೆಗೆ ಆರೋಗ್ಯ ವಿಮೆ ಸೌಲಭ್ಯ ನೀಡಲಾಗುತ್ತದೆ. 70 ವರ್ಷ ವಯಸ್ಸಿನ ಹಾಗೂ ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ವಿಮಾ ಸೌಲಭ್ಯಗಳನ್ನು ನೀಡಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.
ಆಯುಷ್ಮಾನ್ ಭಾರತ್ ಯೋಜನೆಯು ಈ ಹಿಂದೆ ಎಲ್ಲ ವರ್ಗದ ಹಿರಿಯ ನಾಗರೀಕರನ್ನು ಒಳಗೊಂಡಿರಲಿಲ್ಲ. ಇದೀಗ ಈ ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದಾರೆ. 70 ವರ್ಷ ಮೇಲ್ಪಟ್ಟಿರುವ ಎಲ್ಲಾ ಹಿರಿಯ ನಾಗರೀಕರು ಈ ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ.
ಕೇಂದ್ರ ಸರ್ಕಾರದ ಈ ತೀರ್ಮಾನದಿಂದಾಗಿ 4.5 ಕೋಟಿ ಕುಟುಂಬಗಳಿಗೆ ಅನುಕೂಲ ಆಗಲಿದೆ ಎಂದು ಕೇಂದ್ರ ಸಚಿವರಾವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಹಿರಿಯ ನಾಗರಿಕರ ಆದಾಯ ಎಷ್ಟೇ ಇದ್ದರೂ ಅವರು ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ.
ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Scheme) ಅಡಿಯಲ್ಲಿ 4.5 ಕೋಟಿ ಕುಟುಂಬಗಳು ಒಟ್ಟು 6 ಕೋಟಿ ಹಿರಿಯ ನಾಗರಿಕರು 5 ಲಕ್ಷ ರೂ. ಮೌಲ್ಯದ ಉಚಿತ ಚಿಕಿತ್ಸೆಯ ಆರೋಗ್ಯ ವಿಮೆಗೆ ಅರ್ಹರಾಗುತ್ತಾರೆ. ಅರ್ಹ ಫಲಾನುಭವಿಗಳಿಗೆ ಸರ್ಕಾರವು ಈ ಯೋಜನೆಯ ಅಡಿಯಲ್ಲಿ ಹೊಸದಾಗಿ ಕಾರ್ಡ್ ಅನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
Ayushman Bharat Insurance Scheme 2024 ಅಗತ್ಯ ದಾಖಲೆಗಳು:
ಗುರುತಿನ ಪುರಾವೆ (ಆಧಾರ್ ಕಾರ್ಡ್/ಪ್ಯಾನ್ ಕಾರ್ಡ್)
ಮೊಬೈಲ್ ನಂಬರ್
ಜಾತಿ ಪ್ರಮಾಣಪತ್ರ
ಆದಾಯ ಪ್ರಮಾಣಪತ್ರ (ವಾರ್ಷಿಕ ಆದಾಯ 5 ಲಕ್ಷ ರೂ. ಮೀರಿರಬಾರದು)
ನಿಮ್ಮ ಕುಟುಂಬದ ಬಗ್ಗೆ ಮಾಹಿತಿ
ಇತರೆ ಮಾಹಿತಿಗಳನ್ನು ಓದಿ: