ಎಲ್ಲರಿಗೂ ನಮಸ್ಕಾರ, ನೀವು ಕೂಡ ಬ್ಯೂಟಿ ಪಾರ್ಲರ್ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಬೇಕೆ..? ಯಾರು Beauty Parlour Free Training ಗೆ ಅರ್ಜಿ ಸಲ್ಲಿಸಬಹುದು..? ತರಬೇತಿಯ ಅವಧಿ ಹಾಗೂ ವಯೋಮಿತಿ ಸೇರಿದಂತೆ, ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಯಾವಾಗ..? ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ಬ್ಯೂಟಿ ಪಾರ್ಲರ್ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಅರ್ಹರು ಅರ್ಜಿ ಸಲ್ಲಿಸಿ ಈ ತರಬೇತಿ ಲಾಭವನ್ನು ನೀವು ಕೂಡ ಪಡೆದುಕೊಳ್ಳಬಹುದಾಗಿದೆ.
ಬ್ಯೂಟಿ ಪಾರ್ಲರ್ ಕುರಿತಾದ 30 ದಿನಗಳ ಉಚಿತ ತರಬೇತಿಯನ್ನು ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಉಚಿತ ತರಬೇತಿಯನ್ನು ನೀಡುತ್ತಾರೆ.
ಬ್ಯೂಟಿ ಪಾರ್ಲರ್ ತರಬೇತಿಯು ನವೆಂಬರ್ 12 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಪ್ರದೇಶದ ಆಸಕ್ತ ನಿರುದ್ಯೋಗಿ ಯುವತಿಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಬ್ಯೂಟಿ ಪಾರ್ಲರ್ ಉಚಿತ ತರಬೇತಿಯು ಅರ್ಜಿ ಸಲ್ಲಿಸಲು ಬಯಸುವ ಯುವತಿಯರು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ಒಳಗಿನವರು ಅರ್ಜಿ ಸಲ್ಲಿಸಬಹುದು. ಕನ್ನಡ ಓದಲು ಬರೆಯಲು ಬರಬೇಕು.
Beauty Parlour Free Training 2024 ಅಗತ್ಯ ದಾಖಲೆಗಳು:
- ಆಧಾರ್ ಕಾರ್ಡ್
- ರೇಷನ್ ಕಾರ್ಡ್ /ನರೇಗಾ ಜಾಬ್ ಕಾರ್ಡ್
- ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರು ತಿಳಿಸಿದ್ದಾರೆ.
ಇತರೆ ಮಾಹಿತಿಗಳನ್ನು ಓದಿ: