Govt Subsidy Schemes: ಸ್ವಾವಲಂಬಿ ಸಾರಥಿ, ಗಂಗಾ ಕಲ್ಯಾಣ ಯೋಜನೆ ಮತ್ತು ಇತರೆ ಯೋಜನೆಗಳಿಗಾಗಿ ಅರ್ಜಿ ಆಹ್ವಾನ

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ನೀವು ಕೂಡ ಸರ್ಕಾರದಿಂದ ನೀಡಲಾಗುವ ಸಬ್ಸಿಡಿ ಯೋಜನೆಗಳಿಗೆ (Govt Subsidy Schemes) ಅರ್ಜಿ ಸಲ್ಲಿಸಬೇಕಾ..? ಏಷ್ಟು ಸಹಾಯಧನ ಸಿಗುತ್ತದೆ, ಎಂಬೆಲ್ಲ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.

2024-2025 ನೇ ಸಾಲಿನಲ್ಲಿ ಆರ್ಥಿಕ ಅಭಿವೃದ್ಧಿಗಾಗಿ ಈ ಕೆಳಕಂಡ ಕಲ್ಯಾಣ ಯೋಜನೆಗಳಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಗಳಿಗೆ ಅರ್ಜಿ ಆಹ್ವಾನ:

  • ಸ್ವಾವಲಂಬಿ ಸಾರಥಿ
  • ಗಂಗಾ ಕಲ್ಯಾಣ ಯೋಜನೆ
  • ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ
  • ಸ್ವಯಂ ಉದ್ಯೋಗ ನೇರಸಾಲ ಯೋಜನೆ
  • ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಈ ಕೇಳಗೆ ನೀಡಲಾಗಿರುವ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.

ಸ್ವಾವಲಂಬಿ ಸಾರಥಿ:
ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ಆರಂಭಿಸಲು ಸರಕು ವಾಹನ / ಟ್ಯಾಕ್ಸಿ (ಹಳದಿ ಬೋರ್ಡ್) ವಾಹನ ಖರೀದಿಸುವ ಉದ್ದೇಶಕ್ಕೆ. ಘಟಕ ವೆಚ್ಚದ ಶೇ.75 ರಷ್ಟು ಸಹಾಯಧನ ಅಥವಾ ಗರಿಷ್ಠ ರೂ. 4.00 ಲಕ್ಷ ಧನಸಹಾಯ (Govt Subsidy Schemes) ಸರ್ಕಾರ ನೀಡುತ್ತದೆ.

ಗಂಗಾ ಕಲ್ಯಾಣ ಯೋಜನೆ:
ಗಂಗಾ ಕಲ್ಯಾಣ ಯೋಜನೆಯ ಮೂಲಕ 1.20 ಎಕರೆ ಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ ಕೊರೆದು ಪಂಪ್‌ಸೆಟ್ ಅಳವಡಿಸಿ, ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಲಾಗುತ್ತದೆ. ಘಟಕ ವೆಚ್ಚ: 4.75 ಲಕ್ಷ / 3.75 ಲಕ್ಷ ಇದರಲ್ಲಿ 50,000 ರೂ. ಸಾಲ ಸೇರಿರುತ್ತದೆ.

ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ:
ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಘಟಕ ವೆಚ್ಚದ ಶೇ.70ರಷ್ಟು ಸಹಾಯಧನ ಅಥವಾ ಗರಿಷ್ಠ 2 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.

ಸ್ವಯಂ ಉದ್ಯೋಗ ನೇರಸಾಲ ಯೋಜನೆ:
ಸ್ವಯಂ ಉದ್ಯೋಗ ಆರಂಭಿಸಲು ಘಟಕ ವೆಚ್ಚ: 1 ಲಕ್ಷ ರೂ. ಸಹಾಯಧನ: 50,000 ರೂ. ಹಾಗೂ ಸಾಲ 50,000 ರೂ. (ಶೇಕಡ 4ರಷ್ಟು ಬಡ್ಡಿದರ) ಸಾಲ ಮಂಜೂರು ಮಾಡಲಾಗುತ್ತದೆ

ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆ:
ಮಹಿಳಾ ಸ್ವಸಹಾಯ ಸಂಘಗಳಿಗೆ (ಕನಿಷ್ಟ 10 ಸದಸ್ಯರು) ಕಿರು ಅರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲಾಗುವುದು. ಘಟಕ ವೆಚ್ಚ: ರೂ.2.50 ಲಕ್ಷ ಸಹಾಯಧನ: 1.50 ಲಕ್ಷ, ಸಾಲ 1ಲಕ್ಷ ರೂ. (ಶೇಕಡ 4ರಷ್ಟು ಬಡ್ಡಿದರ.

ಪ್ರಮುಖ ದಿನಾಂಕಗಳು:
ಅರ್ಜಿಸಲ್ಲಿಕೆ ಪ್ರಾರಂಭ ದಿನಾಂಕ: 23-10-2024
ಅರ್ಜಿಸಲ್ಲಿಕೆ ಕೊನೆಯ ದಿನಾಂಕ: 23-11-2024

Govt Subsidy Schemes Online Application Link:

ಆನ್‌ಲೈನ್‌ ಅರ್ಜಿ ಲಿಂಕ್‌: ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ವೆಬ್‌ಸೈಟ್:‌ sevasindhu.karnataka.gov.in, sevasindhuservices.karnataka.gov.in

ಅರ್ಜಿ ಸಲ್ಲಿಸುವುದು ಹೇಗೆ..?
sevasindhu.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್ ಕೇಂದ್ರ ಅಥವಾ CSC ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇತರೆ ಮಾಹಿತಿಗಳನ್ನು ಓದಿ:

ಗೃಹಲಕ್ಷ್ಮೀ ಯೋಜನೆಯ 13 ನೇ ಕಂತಿನ 2,000 ರೂ. ಜಮಾ

ಉಚಿತ ಹೊಲಿಗೆ ಯಂತ್ರ ಯೋಜನೆ 2024

ಗೃಹಲಕ್ಷ್ಮೀ ಯೋಜನೆಯ 2000 ರೂ. ಹಣ ಜಮಾ, DBT Status ಚೆಕ್ ಮಾಡಿ

Leave a Comment