ಎಲ್ಲರಿಗೂ ನಮಸ್ಕಾರ, ನೀವು ಕೂಡಾ ಸರ್ಕಾರದಿಂದ ಸಹಾಯಧನ ಪಡೆಯಬೇಕೆ..? ಯಾವುದು ಈ ಯೋಜನೆ..? (Govt Subsidy Schemes) ಈ ಯೋಜನೆಗಳ ಅಡಿಯಲ್ಲಿ ಎಷ್ಟು ಸಹಾಯಧನ ದೊರೆಯಲಿದೆ..? ಯಾರು ಈ ಯೋಜನೆಗೆ ಅರ್ಜಿ ಸಲ್ಲುಸಬಹುದು..? ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ಮಹಿಳೆಯರು ಸ್ವಯಂ ಉದ್ಯೋಗವನ್ನು ಪ್ರಾರಂಭಿಸಲು ಆದಾಯ ಉತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಮಹಿಳೆಯರು ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು.
Udyogini Scheme ಹಾಗೂ ಇತರೆ ಯೋಜನೆಗಳು:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ:
ಆದಾಯ ಮಿತಿ: 2 ಲಕ್ಷ ರೂ. ಒಳಗೆ ಇರಬೇಕು.
ಘಟಕ ವೆಚ್ಚ: ಕನಿಷ್ಟ 1 ಲಕ್ಷ ದಿಂದ ಗರಿಷ್ಟ 3 ಲಕ್ಷ ರೂ. ಸಹಾಯಧನ ಮೊತ್ತ: ಶೇ 50 ರಷ್ಟು
ಸಾಮಾನ್ಯ ವರ್ಗದ ಫಲಾನುಭವಿಗಳಿಗೆ:
ಆದಾಯ ಮಿತಿ: 1.50 ಲಕ್ಷ ರೂ. ಮೀರಿರಬಾರದು.
ಘಟಕ ವೆಚ್ಚ: ಗರಿಷ್ಟ 3 ಲಕ್ಷ ರೂ.
ಸಹಾಯಧನ: ಶೇ.30 ರಷ್ಟು
ವಯೋಮಿತಿ ವಿವರ:
ಉದ್ಯೋಗಿನಿ ಯೋಜನೆ (Udyogini Scheme) ಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಕನಿಷ್ಠ 28 ವರ್ಷ ಹಾಗೂ ಗರಿಷ್ಠ 55 ಒಳಗಿನವರಾಗಿರಬೇಕು.
ಇತರೆ ಯೋಜನೆಗಳ ವಿವರ:
ಚೇತನ ಯೋಜನೆ ಮಾಹಿತಿ:
ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು 30.000 ರೂ. ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಮಹಿಳೆಯು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು.
ಧನಶ್ರೀ ಯೋಜನೆಯ ಮಾಹಿತಿ:
ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಈ ಯೋಜನೆಯ ಮೂಲಕ 30 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು ಕನಿಷ್ಠ 18 ಹಾಗೂ ಗರಿಷ್ಠ 60 ವರ್ಷ ಮೀರಿರಬಾರದು.
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ:
ಲಿಂಗತ್ವ ಅಲ್ಪಸಂಖ್ಯಾತರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಅವರಿಗೆ 30,000 ರೂ. ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ:
1993-94 & 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಈ ಯೋಜನೆಯ ಮೂಲಕ 30,000 ರೂ. ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
Govt Subsidy Schemes ವಿಶೇಷ ಸೂಚನೆಗಳು:
- ಅರ್ಜಿ ಸಲ್ಲಿಸಲು ಬಯಸುವವರು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು.
- ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ (Unspent) ಅನುದಾನದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷಿಗಳು/ಅರ್ಜಿದಾರರು ಸಹ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು.
- ಈ ಮೇಲಿನ ಎಲ್ಲಾ ಯೋಜನೆಗಳ ಅರ್ಜಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಇರುತ್ತವೆ.
- ನಿಮ್ಮ ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು.
- ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಮಾನ್ಯ ಸಚಿವರು/ಮಾನ್ಯ ಶಾಸಕರು, ಕರ್ನಾಟಕ ಸರ್ಕಾರ/ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು.
- 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ ಅಥವಾ ನಿಗಮದ ವೆಬ್ ಸೈಟ್ (https://kswdc.karnataka.gov.in) ಸಂಪರ್ಕಿಸಬಹುದು.
Govt Subsidy Schemes ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21-08-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21-09-2024
ಪ್ರಮುಖ ಲಿಂಕ್ ಗಳು:
ಆನ್ ಲೈನ್ ಅರ್ಜಿ ಲಿಂಕ್: Apply ಮಾಡಿ
ಅಧಿಕೃತ ವೆಬ್‌ಸೈಟ್: sevasindhu.karnataka.gov.in, kswdc.karnataka.gov.in
ಕಛೇರಿ ವಿಳಾಸ:
6ನೇ ಮಹಡಿ, ಜಯನಗರ ವಾಣಿಜ್ಯ ಸಂಕೀರ್ಣ, 4ನೇ ಬ್ಲಾಕ್, ಜಯನಗರ, ಬೆಂಗಳೂರು- 560 011, 560 011, ದೂರವಾಣಿ ಸಂಖ್ಯೆ: 080-26632973.
ಇತರೆ ಮಾಹಿತಿಗಳನ್ನು ಓದಿ: