ಎಲ್ಲರಿಗೂ ನಮಸ್ಕಾರ, ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶಿಕ್ಷಕರ ಹುದ್ದೆಗಳನ್ನು (Teachers Recruitment 2024) ನೇಮಕಾತಿ ಮೂಲಕ ಭರ್ತಿಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯು ಅನುಮತಿ ನೀಡಿದೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
Karnataka GPSTR Teachers Recruitment 2024:
1 ರಿಂದ 5 ನೇ ತರಗತಿ (ಪ್ರಾಥಮಿಕ ಶಾಲಾ ಶಿಕ್ಷಕರು) 4,424 ಶಿಕ್ಷಕರು, 6 ರಿಂದ 8 ನೇ ತರಗತಿಗೆ (ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು) 78 ಹಾಗೂ 380 ದೈಹಿಕ ಶಿಕ್ಷಣ ಶಿಕ್ಷಕರು (ಗ್ರೇಡ್-2) ಸೇರಿದಂತೆ ಒಟ್ಟು 5,267 ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲು ಸಿದ್ಧತೆ ನಡೆಸಿದೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ 6,584 ಶಾಲಾ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಶೇ 80 ರಷ್ಟು ಹುದ್ದೆಗಳಿಗೆ ನೇಮಕಾತಿ ಮಾಡಲು ಸರ್ಕಾರ ಮುಂದಾಗಿದೆ. 2024-25 ನೇ ಸಾಲಿನ ಬಜೆಟ್‌ನಲ್ಲಿ ಘೋಷಿಣೆ ಮಾಡಿರುವಂತೆ ರಾಜ್ಯ ಸರ್ಕಾರ ಈ ಕೆಸಲವನ್ನು ಮಾಡುತ್ತಿದೆ.
ಇತರೆ ಮಾಹಿತಿಗಳನ್ನು ಓದಿ: