ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮೀ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ. ಗೃಹಲಕ್ಷ್ಮೀ ಯೋಜನೆಯ (Gruha Lakshmi Scheme) ಹಣವು ಯಾವಾಗ ನಿಮ್ಮ ಖಾತೆಗೆ ಜಮಾ ಆಗಲಿದೆ ಎಂದು ಕಾಯುತ್ತಿದ್ದೀರಾ..? ಗೃಹಲಕ್ಷ್ಮೀ ಯೋಜನೆಯ ಹಣ ಯಾವಾಗ ಸಂದಾಯ ಆಗಲಿದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ
ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯು ಒಂದಾಗಿದೆ. ಈ ಯೋಜನೆಯನ್ನು ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಅರ್ಹ ಮನೆ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ಅನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಸಂದಾಯ ಮಾಡಲಾಗುತ್ತದೆ.
Gruha Lakshmi Scheme 12th Installment:
ಗೃಹಲಕ್ಷ್ಮೀ ಯೋಜನೆಯ ಜೂನ್ ತಿಂಗಳಿನ 2 ಸಾವಿರ ರೂ. ಹಣವು ಫಲಾನುಭವಿಗಳ ಖಾತೆಗೆ ಜಮಾ ಆಗಿದ್ದು, ಜುಲೈ ಮತ್ತು ಆಗಸ್ಟ್ ತಿಂಗಳಿನ ಹಣವು ಇನ್ನು ಜಮಾ ಆಗಿಲ್ಲ. ಯಾವಾಗ ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳಿನ ಹಣವು ಜಮಾ ಆಗಲಿದೆ ಎಂದು ಫಲಾನುಭವಿಗಳು ಕಾಯುತ್ತಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ 2 ಸಾವಿರ ರೂ. ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದೆ, ಇದಾದ ಕೆಲವೇ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆಯಾದ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ನಿರಂತರ ಪ್ರಕ್ರಿಯೆ. ಯಾವುದೇ ಕಾರಣಕ್ಕೂ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಲಕ್ಷ್ಮಿ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.
ಇತರೆ ಮಾಹಿತಿಗಳನ್ನು ಓದಿ: