ಎಲ್ಲರಿಗೂ ನಮಸ್ಕಾರ.. ನೀವು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದಿರಾ? ಹಾಗಿದ್ದರೆ ಈ ಮಾಹಿತಿ ನೀಮಗೆ ಉಪಯೋಗವಾಗುತ್ತದೆ, ಏಕೆಂದರೆ ರಾಜ್ಯ ಸರ್ಕಾರದ ಪ್ರಮುಖ ಐದು ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ (Gruhalakshmi Fifth Installment Credited) ಐದನೇ ಕಂತಿನ ಹಣ ಜಮಾ ಮಾಡಲಾಗಿರುವ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಅರ್ಜಿ ಸಲ್ಲಿಕೆ ಮಾಡಿರುವ ಗೃಹಲಕ್ಷ್ಮೀಯರು ತಮ್ಮ ಖಾತೆಗೆ ಹಣ ಬಂದಿದೇಯಾ ಚಕ್ ಮಾಡಿಕೊಳ್ಳಿ.
ನಿಮಗೆಲ್ಲಾ ತಿಳಿದಿರುವಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಐದು ಪ್ರಮುಖ ಪಂಚ ಯೋಜನೆಗಳನ್ನು ಜಾರಿಗೆ ತರುವುದಾಗಿ ತಿಳಿಸಲಾಗಿತ್ತು. ಭರವಸೆ ನೀಡಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗುತ್ತಿದೆ.
Gruhalakshmi Fifth Installment Credited
ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಗೃಹ ಲಕ್ಷ್ಮಿ (Gruhalakshmi Scheme) ಯೋಜನೆಯು ಪ್ರಮುಖ ಪಾತ್ರವಹಿಸಿದೆ. ಬರ ಮತ್ತು ಬೆಲೆ ಏರಿಕೆಯಿಂದ ತತ್ತರಿಸಿರುವ ಜನ ಸಾಮಾನ್ಯರಿಗೆ ಸರ್ಕಾರದ ಈ ಯೋಜನೆಗಳು ಅನುಕೂಲಕರವಾಗಿವೆ.
ಗೃಹಲಕ್ಷ್ಮೀ ಯೋಜನೆಯನ್ನು 2023 ರ ಆಗಸ್ಟ 30 ರಿಂದ ಜಾರಿಗೆ ತರಲಾಗಿದ್ದು, ಅರ್ಹ ಫಲಾನಿಭವಿಗಳಿಗೆ ಈಗಾಗಲೇ ನಾಲ್ಕು ಕಂತಿನ 8,000 ರೂ. ಹಣವನ್ನು ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದ್ದು, ಐದನೇ ಕಂತಿನ 2,000 ರೂ. ಯನ್ನು Gruhalakshmi DBT ಮೂಲಕ ಜಮಾ ಮಾಡಲಾಗುತ್ತಿದೆ.
ಕೆಲವರಿಗೆ ತಾಂತ್ರಿಕ ಕಾರಣಗಳಿಂದ ಗೃಹ ಲಕ್ಷ್ಮಿ ಯೋಜನೆಯ 2,000 ರೂ. ಹಣ ಜಮಾ ಆಗಿಲ್ಲ ಎನ್ನುತ್ತಾರೆ ಅಧಿಕಾರಿಗಳು. ಅಂತಹ ಫಲಾನುಭವಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಅಥವಾ ಅಂಗನವಾಡಿ ಅಧಿಕಾರಿಗಳನ್ನು ಭೇಟಿಯಾಗಿ ನಿಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು.
Gruhalakshmi DBT Status Check ಮಾಡುವ ಸುಲಭ ವಿಧಾನ
ಗೃಹಲಕ್ಷ್ಮೀ ಯೋಜನೆಯ 2,000 ರೂ. ಹಣ ಜಮಾ ಆಗಿರುವ ವಿವರವನ್ನು ಕರ್ನಾಟಕ ಸರ್ಕಾರದ ಅಧಿಕೃತ DBT Karnataka App ಮೂಲಕ ಈ ಕೇಳಗೆ ನೀಡಲಾಗಿರುವ ವಿಧಾನವನ್ನು ಅನುಸರಿಸಿ ನಿಮ್ಮ Gruha Lakshmi DBT Status Check ಮಾಡಬಹುದು.
Step-1: ಮೊದಲನೆಯದಾಗಿ ಕೇಳಗೆ ನೀಡಿರುವ ಲಿಂಕ್ ಮೂಲಕ DBT Karnataka ಅಧಿಕೃತ App ಡೌನ್‌ಲೋಡ್ ಮಾಡಿಕೊಳ್ಳಿ.
Step-2: App ಓಪನ್ ಮಾಡಿ. ಅಲ್ಲಿ Enter Aadhaar Number ಎಂಬಲ್ಲಿ ಫಲಾನುಭವಿಯ ಆಧಾರ ಸಂಖ್ಯೆಯನ್ನು ಎಂಟರ್ ಮಾಡಿ. GET OTP ಎಂಬುದರ ಮೇಲೆ ಕ್ಲಿಕ್ ಮಾಡಿ.
Step-3: ಫಲಾನುಭವಿಯ ಆಧಾರಗೆ ಲಿಂಕ್ ಇರುವ ಮೊಬೈಲ್ ನಂಬರ್‌ಗೆ OTP ಬರುತ್ತದೆ. Enter OTP ಎಂದಿರುವಲ್ಲಿ ಆರು ಸಂಖ್ಯೆಗಳ OTP ಎಂಟರ್ ಮಾಡಿ. Verify OTP ಬಟನ್ ಮೇಲೆ ಕ್ಲಿಕ್ ಮಾಡಿ.
Step-4: ಫಲಾನುಭವಿಯ ವಯಕ್ತಿಕ ವಿವರ ನಿಮ್ಮ ಮುಂದೆ ಕಾಣುತ್ತದೆ. ಅಲ್ಲಿ ಮೊಬೈಲ್ ನಂಬರ್ ಎಂಟರ್ ಮಾಡಲು ತಿಳಿಸಲಾಗಿರುತ್ತದೆ. ಆಧಾರಗೆ ಲಿಂಕ್ ಇರುವ ಮೊಬೈಲ್ ನಂಬರ್ ನಮೂದಿಸಿ. OK ಬಟನ್ ಮೇಲೆ ಕ್ಲಿಕ್ ಮಾಡಿ.
Step-5: ನಂತರ Create mPIN ಎಂದಿರುತ್ತದೆ. ನಿಮ್ಮ ನೆನಪಿನಲ್ಲಿ ಉಳಿಯುವ ನಾಲ್ಕು ಅಂಕಿಗಳ mPIN ಎಂಟರ್ ಮಾಡಿ. Submit ಬಟನ್ ಮೇಲೆ ಕ್ಲಿಕ್ ಮಾಡಿ.
Step-6: ನಂತರ ಅಲ್ಲಿ Select Beneficiary ಎಂದು ಬರುತ್ತದೆ. ನೀವು Add ಮಾಡಿರುವ ಫಲಾನುಭವಿಯನ್ನು ಆಯ್ಕೆ ಮಾಡಿ.
Step-7: ಫಲಾನುಭವಿಯನ್ನು ಆಯ್ಕೆ ಮಾಡಿದ ನಂತರ ನೀವು Create ಮಾಡಿದ mPIN ಅನ್ನು ಎಂಟರ್ ಮಾಡಿ. LOGIN ಬಟನ್ ಮೇಲೆ ಕ್ಲಿಕ್ ಮಾಡಿ.
Step-8: ಮೊದಲನೇ ಆಯ್ಕೆ Payment Status ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
Step-9: ಅಲ್ಲಿ ನಿಮ್ಮ ಮುಂದೆ Gruhalakshmi DBT Status Check ಮಾಡುವ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.
Step-10: ನಿಮ್ಮ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಯೋಜನೆಯ 2000 ರೂ. ಜಮಾ ಆಗಿರುವ ಮಾಹಿತಿ ಲಭ್ಯವಾಗುತ್ತದೆ. ನಿಮ್ಮ ಯಾವ ಬ್ಯಾಂಕ್ ಖಾತೆಗೆ, ಯಾವ ದಿನಾಂಕದಂದು ಹಣ ವರ್ಗಾವಣೆ ಆಗಿರುತ್ತದೆ ಎಂಬ ವಿವರಗಳನ್ನು ನೀವು ಪರಿಶೀಲನೆ ಮಾಡಿಕೊಳ್ಳಬಹುದು.
Gruhalakshmi DBT Status Check ಪ್ರಮುಖ ಲಿಂಕ್‌ಗಳು:
DBT Karnataka App Link: Download ಮಾಡಿ
ಇತರೆ ಮಾಹಿತಿಗಳನ್ನು ಓದಿ