ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರವು ಗಣೇಶ ಚತುರ್ಥಿಗೆ ಗೃಹಲಕ್ಷ್ಮೀ ಯೋಜನೆಯ (GruhaLakshmi Scheme) ಫಲಾನುಭವಿಗಳ ಗುಡ್ ನ್ಯೂಸ್ ನೀಡಿದೆ. ಗೃಹಲಕ್ಷ್ಮೀ ಯೋಜನೆಯ 12 ಮತ್ತು 13 ನೇ ಕಂತಿನ ಹಣವು ಯಾವಾಗ ನಿಮ್ಮ ಖಾತೆಗೆ ಜಮಾ ಆಗಲಿದೆ ಎಂದು ಕಾಯುತ್ತಿದ್ದೀರಾ..? ಯಾವಾಗ ಹಣ ಸಂದಾಯವಾಗಲಿದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು ಮಹಿಳೆಯರ ಸಭಲೀಕರಣಕ್ಕಾಗಿ ರಾಜ್ಯ ಸರ್ಕಾರವು ಜಾರಿಗೆ ತಂದಿದೆ. ಇದುವರೆಗೂ ಕೋಟಿಗೂ ಅಧಿಕೃತ ಮಹಿಳೆಯರು ಈ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ.
GruhaLakshmi Scheme 12th and 13th Installment:
ಗೃಹಲಕ್ಷ್ಮೀ ಯೋಜನೆಯ ಮೂಲಕ ಅರ್ಹ ಮನೆ ಯಜನಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ. ಅನ್ನು ಅವರ ಖಾತೆಗೆ ಜಮಾ ನೇರವಾಗಿ ಜಮಾ ಮಾಡಲಾಗುತ್ತದೆ. ಇದುವರೆಗೂ 11 ಕಂತಿನ 22,000 ಸಾವಿರ ರೂ. ಅರ್ಹರ ಖಾತೆ ಸೇರಿದೆ. 12 ಮತ್ತು 13 ನೇ ಕಂತಿನ ಹಣವು ಇನ್ನು ಫಲಾನುಭವಿಗಳ ಖಾತೆಗೆ ಸಂದಾಯವಾಗಿಲ್ಲ.
ತಾಂತ್ರಿಕ ಸಮಸ್ಯೆಯಿಂದ ಗೃಹಲಕ್ಷ್ಮಿ ಯೋಜನೆಯ (GruhaLakshmi Scheme) ಹಣವು ಬಿಡುಗಡೆಯಾಗಿಲ್ಲ ಎಂದು ಇಲಾಖೆ ತಿಳಿಸಿದ್ದು, ಸದ್ಯ ತಾಂತ್ರಿಕ ಸಮಸ್ಯೆ ಪರಿಹರಿಸಲಾಗಿದ್ದು, ನಾಳೆ ಅಥವಾ ನಾಡಿದ್ದು ಗೃಹಲಕ್ಷ್ಮಿ ಯೋಜನೆಯ ಹಣವು ಯಜಮಾನಿಯರ ಖಾತೆಗೆ ಸಂದಾಯ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಹೌದು ಈ ಬಗ್ಗೆ ಮಾಹಿತಿ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಎಲ್ಲಾ ಜಿಲ್ಲೆಗಳಿಗೂ 11 ನೇ ಕಂತಿನ ಹಣ ಬಿಡುಗಡೆ ಆಗಿದ್ದು, ಇನ್ನು ನಾಲ್ಕೈದು ದಿನಗಳಲ್ಲಿ 12 ಮತ್ತು 13ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಗೃಹಲಕ್ಷ್ಮೀ ಖಾತೆಗಳು ಡಿಲೀಟ್ ಆಗಿವೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇದುವರೆಗೂ ಒಂದೇ ಒಂದು ಖಾತೆಯು ಕೂಡ ಡಿಲೀಟ್ ಆಗಿಲ್ಲ. ಯಾರು GST ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದರು ಅಂತವರು ಅಪ್ ಲೋಡ್ ಮಾಡಿರುವ ಅರ್ಜಿಗಳನ್ನು ಆಗಲೇ ಡಿಲೀಟ್ ಮಾಡಿದ್ದೇವೆ. ನೋಂದಣಿ ಆದ ಬಳಿಕ ನಾವು ಡಿಲೀಟ್ ಮಾಡಿಲ್ಲ ಎಂದ ಹೇಳಿದ್ದಾರೆ.
ಇತರೆ ಮಾಹಿತಿಗಳನ್ನು ಓದಿ: