ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್. ನೀವು ಕೂಡ ಗೃಹಲಕ್ಷ್ಮೀ ಯೋಜನೆಗೆ (Gruhalakshmi Scheme) ಅರ್ಜಿ ಸಲ್ಲಿಸಿದ್ದೀರಾ..? 12 ಮತ್ತು 13 ನೇ ಕಂತಿನ ಹಣವು ಯಾವಾಗ ನಿಮ್ಮ ಖಾತೆಗೆ ಜಮಾ ಆಗಲಿದೆ ಎಂದು ಕಾಯುತ್ತಿದ್ದೀರಾ..? ಹಾಗಿದ್ದರೇ ಚಿಂತೆ ಬಿಡಿ ಈ ಲೇಖನದಲ್ಲಿ ಮಾಹಿತಿ ನೀಡಲಿದ್ದೇವೆ ಓದಿರಿ.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನಗೆಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನು ಅವರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ. ಕೋಟಿಗೂ ಅಧಿಕ ಮಹಿಳೆಯರು ಈ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ.
Gruhalakshmi Scheme 12th and 13th Installment:
ಗೃಹಲಕ್ಷ್ಮೀ ಯೋಜನೆಯ 11 ಕಂತುಗಳ 22,000 ರೂ. ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಆಗಿದೆ. 12 ಮತ್ತು 13 ನೇ ಕಂತಿನ ಹಣವು ಯಾವಾಗ ಜಮಾ ಆಗಲಿದೆ ಎಂದು ಫಲಾನುಭವಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಈ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆ ನಿತ್ಯ, ಸತ್ಯ, ನಿರಂತರವಾದುದು. ಕಳೆದ ಎರಡು ತಿಂಗಳಿನ ಬಾಕಿ ಹಣವನ್ನು ಒಂದೇ ಬಾರಿ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರು ತಿಳಿಸಿದ್ದಾರೆ.
ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ ಹಿಂದಷ್ಟೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅವರಿಗೂ ಸಹ ಒಮ್ಮೆಲೇ ಹಣ ಪಾವತಿಯಾಗಲಿದೆ ಎಂದು ಹೇಳಿದ್ದಾರೆ.
ಯಾರಿಗೆ ಗೃಹಲಕ್ಷ್ಮೀ ಯೋಜನೆಯ (Gruhalakshmi Scheme) ಹಣ ಜಮಾ ಆಗಿಲ್ಲ ಅಂತಹ ಮಹಿಳೆಯರು ಕಡ್ಡಾಯವಾಗಿ ಈ ಕೆಲಸ ಮಾಡಬೇಕು. ಇನ್ನುವರೆಗೆ ಯಾರು ಗೃಹಲಕ್ಷ್ಮೀ ಯೋಜನೆಗೆ ನೊಂದಣಿ ಮಾಡಿಕೊಳ್ಳದ ಫಲಾನುಭವಿಗಳಿಗೆ ಸೂಕ್ತ ಮಾಹಿತಿ ನೀಡಲು ತಾಲ್ಲೂಕು ವಾರು ಶಿಶು ಅಭಿವೃದ್ದಿ ಯೋಜನಾ ಕಚೇರಿಯಲ್ಲಿ ಸಹಾಯ ಕೇಂದ್ರ ತೆರೆಯಲಾಗಿದೆ. ಹಾಗೆ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ನೊಂದಾಣಿ ಮಾಡಿಕೊಳ್ಳಬಹುದು.
ಇತರೆ ಮಾಹಿತಿಗಳನ್ನು ಓದಿ: