Gruhalakshmi Scheme: ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್. ನೀವು ಕೂಡ ಗೃಹಲಕ್ಷ್ಮೀ ಯೋಜನೆಯ (Gruhalakshmi Scheme) ಫಲಾನುಭವಿಗಳಾ..? ಹಾಗಿದ್ದರೆ ಸರ್ಕಾರದಿಂದ ಸಿಗಲಿದೆ ಬಂಪರ್ ಬಹುಮಾನ. ಅದು ಏನೂ ಅಂತಿರಾ..? ಈ ಲೇಖನ ಓದಿ.

ಹೌದು ಗೃಹಲಕ್ಷ್ಮೀ ಯೋಜನೆಗೆ ವರುಷದ ಸಂಭ್ರಮ. ಈ ಸಂದರ್ಭದಲ್ಲಿ ಕುಟುಂಬದ ಮನೆ ಯಜಮಾನಿ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಭಾಶಯ ಮತ್ತು ಅಭಿನಂದನೆ ತಿಳಿಸಿದ್ದಾರೆ. ಜೊತೆಗೆ ಯಜಮಾನಿಯರಿಗೆ ಬಹುಮಾನವನ್ನು ಘೋಷಿಸಿದ್ದಾರೆ.

Gruhalakshmi Scheme Reels:

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿಯೋಜನೆಯು ಜಾರಿಯಾಗಿ ಒಂದು ವರ್ಷವಾಗಿದೆ. ಗೃಹಲಕ್ಷ್ಮಿಯೋಜನೆಯಿಂದ ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆ ತಂದಿದೆ ಎಂಬುದನ್ನು ಯಜಮಾನಿಯರು ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್‌ಗಳ ಮೂಲಕ ಹಂಚಿಕೊಳ್ಳಬಹುದು.

ಸೆಪ್ಟೆಂಬರ್ 1 ರಿಂದ 30 ವರೆಗೆ ರೀಲ್ಸ್ ಮಾಡಿ ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್ ಗಳಲ್ಲಿ ಶೇರ್ ಮಾಡುವ ಮೂಲಕ ಅದನ್ನು ಹಂಚಿಕೊಳ್ಳುವಂತೆ ತಿಳಿಸಿದ್ದಾರೆ. ಅತಿ ಹೆಚ್ಚು ವೀಕ್ಷಣೆಯಾದ ರೀಲ್ಸ್ ಗೆ ನಾನು ವೈಯಕ್ತಿಕವಾಗಿ ಬಹುಮಾನ ನೀಡುತ್ತೇನೆ ಎಂದು ಸಚಿವರು ಹೇಳಿದ್ದಾರೆ. ನೀವು ಕೂಡಾ ರೀಲ್ಸ್ ಮಾಡಿ ಬಹುಮಾನ ಗೆಲ್ಲಬಹುದು.

ಮೊದಲ 50 ಯಜಮಾನಿಯರ ರೀಲ್ಸ್ ಹಾದಿಯನ್ನು ಎದುರು ನೋಡುತ್ತಿದ್ದೇನೆ, ಗೃಹಲಕ್ಷ್ಮೀ ಯೋಜನೆ (Gruhalakshmi Scheme) ಯಿಂದ ತಮ್ಮ ಜೀವನದಲ್ಲಿ ಆಗಿರುವ ಬದಲಾವಣೆಯನ್ನು ರಾಜ್ಯದ ಜನರ ಮುಂದೆ ಹಂಚಿಕೊಳ್ಳಿ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳಕರ್ ಅವರು ಮನವಿ ಮಾಡಿದ್ದಾರೆ.

ಇತರೆ ಮಾಹಿತಿಗಳನ್ನು ಓದಿ:

ಗೃಹಲಕ್ಷ್ಮೀ ಯೋಜನೆ DBT Status ಚೆಕ್ ಮಾಡಿ

ಉಚಿತ ಆಧಾರ್ ಅಪ್‌ಡೇಟ್‌​ ಈ ದಿನಾಂಕದೊಳಗೆ ಮಾಡಿಸಿ

Leave a Comment