KAS ಹುದ್ದೆಗಳಿಗೆ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್. ಪ್ರಶ್ನೆ ಪತ್ರಕೆ ಕನ್ನಡ ಅನುವಾದದಲ್ಲಿ ಅಸಮರ್ಪಕತೆ ಇರುವುದರಿಂದ ಕನ್ನಡ ಅಭ್ಯರ್ಥಿಗಳಿಗೆ ಅನ್ಯಾಯ ಆಗಬಾರದೆಂದು ಮರುಪರೀಕ್ಷೆ (KPSC Re Exam) ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆಪಿಎಸ್ಸಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಖದ್ದು ಸಿಎಂ ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದು, “ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್ಸಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ವಾಗ್ಧಾನ ನೀಡಿದ್ದಾರೆ.
ಪ್ರಶ್ನೆ ಪತ್ರಕೆ ಕನ್ನಡ ಅನುವಾದದಲ್ಲಿ ತಪ್ಪುಗಳಿರುವುದರಿಂದ ಕನ್ನಡ ಅಭ್ಯರ್ಥಿಗಳಿಗೆ ಗೊಂದಲ ಉಂಟಾಗಿತ್ತು ರಾಜ್ಯಾದ್ಯಂತ ಸ್ಪರ್ಧಾರ್ಥಿಗಳು ಹಾಗೂ ಕನ್ನಡ ಪರ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದರು.
ಇತರೆ ಮಾಹಿತಿಗಳನ್ನು ಓದಿ: