ಎಲ್ಲರಿಗೂ ನಮಸ್ಕಾರ, ಸರ್ಕಾರವು ರೈತರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಕೃಷಿ ಭಾಗ್ಯ ಯೋಜನೆಯ (Krishi Bagya Yojane) ಬಗ್ಗೆ ನಿಮಗೆ ತಿಳಿದಿದೆಯೇ..? ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಯಾವೇಲ್ಲಾ ಸೌಲಭ್ಯಗಳು ದೊರೆಯಲಿದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ರೈತರಿಗೆ ಕೃಷಿ ಹೊಂಡ, ಕ್ಷೇತ್ರ ಬದು ನಿರ್ಮಾಣ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪಸೆಟ್ (ಗರಿಷ್ಠ 10 HP), ಲಘು ನೀರಾವರಿ ಹಾಗೂ ತಂತಿ ಬೇಲಿ ಘಟಕಗಳನ್ನು ಅಳವಡಿಸಿಕೊಳ್ಳಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ರೈತರ ಅರ್ಜಿ ಸಲ್ಲಿಸಿ ಲಾಭ ಪಡೆದುಕೊಳ್ಳಬಹುದು.
Krishi Bagya Yojane Application:
ಅರ್ಜಿ ಸಲ್ಲಿಸಲು ಬಯಸುವ ರೈತರು ಸೂಕ್ತ ದಾಖಲೆಗಳೊಂದಿಗೆ 20-10-2024 ರ ಒಳಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ನೀವು ಕೂಡ ಅರ್ಜಿ ಸಲ್ಲಿಸಿ ಕೃಷಿ ಹೊಂಡ, ಕ್ಷೇತ್ರ ಬದು ನಿರ್ಮಾಣ, ಲಘು ನೀರಾವರಿ ಹಾಗೂ ತಂತಿ ಬೇಲಿ ಘಟಕಗಳನ್ನು ಸೇರಿದಂತೆ ಮಂತಾದ ಸೌಲಭ್ಯಗಳ ಲಾಭ ಪಡೆದುಕೊಳ್ಳಬಹುದು.
ಇತರೆ ಮಾಹಿತಿಗಳನ್ನು ಓದಿ: