ಕೃಷಿ ಭಾಗ್ಯ ಯೋಜನೆ: ರೈತರಿಗೆ ಶೇ.90 ರಷ್ಟು ಸಹಾಯಧನ | Krishi Bhagya Scheme 2024 Karnataka Subsidy For Farmers

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಕೃಷಿ ಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಬೇಕೆ..? ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಏನೆಲ್ಲಾ ಸೌಲಭ್ಯಗಳು ದೊರೆಯಲಿವೆ..? Krishi Bhagya Scheme ಗೆ ಅರ್ಜಿ ಸಲ್ಲಿಸಿದ ರೈತರಿಗೆ ಎಷ್ಟು ಸಹಾಯಧನ ಸಿಗಲಿದೆ..? ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.

ಮಳೆಯಾಧಾರಿತ ಕೃಷಿ ನೀತಿ ಅನ್ವಯ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನ ಮಟ್ಟವನ್ನು ಸುಧಾರಿಸು ನಿಟ್ಟಿನಲ್ಲಿ ಕೃಷಿ ಭಾಗ್ಯ ಯೋಜನೆಯುನ್ನು ಪ್ರಸಕ್ತ ಸಾಲಿನಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮರುಜಾರಿಗೊಳಿಸಲಾಗುತ್ತಿದೆ. ಹಾಗೂ ಕೃಷಿ ಭಾಗ್ಯ-ಎಸ್.ಡಿ.ಎಂ.ಎಫ್ (Krishi Bhagya Yojane) ಯೋಜನೆಯನ್ನು ಜಿಲ್ಲೆಯ ಬರ ಪೀಡಿತ ಬ್ರಹ್ಮಾವರ, ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಪ್ರಾರಂಭಮಾಡಲಾಗಿದೆ.

ಕೃಷಿ ಭಾಗ್ಯ ಯೋಜನೆಯು (Krishi Bhagya Scheme) ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್‌ ಸೆಟ್ ಘಟಕಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ.80 ರಷ್ಟು ಹಾಗೂ SC/ ST ರೈತರಿಗೆ ಶೇ.90 ರಷ್ಟು ಸಹಾಯಧನ ದೊರೆಯಲಿದೆ.

ತುಂತುರು (ಹನಿ) ನೀರಾವರಿ ಘಟಕದಡಿಲ್ಲಿ ಎಲ್ಲಾ ವರ್ಗದ ರೈತರಿಗೆ ಶೇ. 90 ರಷ್ಟು ಸಹಾಯಧನ ಹಾಗೂ ಕೃಷಿ ಹೊಂಡದ ಸುತ್ತಲು ತಂತಿಬೇಲಿ ಅಳವಡಿಸಿಕೊಳ್ಳಲು ಸಾಮಾನ್ಯ ವರ್ಗದ ರೈತರಿಗೆ ಶೇ. 40 ಹಾಗೂ SC/ ST ರೈತರಿಗೆ ಶೇ. 50 ರಷ್ಟು ಸಹಾಯಧನ ಸಿಗುತ್ತದೆ.

Krishi Bhagya Scheme ಅಗತ್ಯ ದಾಖಲೆಗಳು:

  • ಪಾಸ್‌ಪೋರ್ಟ್ ಅಳತೆಯ ಪೋಟೋ
  • ಜಮೀನಿನ ಪಹಣಿ (ಉತಾರ್)
  • ಜಾತಿ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಬುಕ್

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದ್ದಾರೆ.

ಇತರೆ ಮಾಹಿತಿಗಳನ್ನು ಓದಿ:

ಗೃಹಲಕ್ಷ್ಮೀ ಯೋಜನೆಯ 2000 ರೂ. ಹಣ ಜಮಾ, DBT Status ಚೆಕ್ ಮಾಡಿ

ಸ್ವಾವಲಂಬಿ ಸಾರಥಿ ಯೋಜನೆ: 3 ಲಕ್ಷ ರೂ. ಸಹಾಯಧನ

ಉಚಿತ ಹೊಲಿಗೆ ಯಂತ್ರ ಯೋಜನೆ 2024

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ ಸಂಖ್ಯೆ ಲಿಂಕ್ ಆಗಿದ್ಯಾ..? ಚೆಕ್ ಮಾಡಿ

Leave a Comment