ಎಲ್ಲರಿಗೂ ನಮಸ್ಕಾರ, ನೀವು ಕೂಡ ನಿಮ್ಮ ವಿವಾಹ ನೋಂದಣಿ ಮಾಡಿಸಿಕೊಳ್ಳಬೇಕೆ..? (Marriage Certificate Online Karnataka) ಹೇಗೆ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ತಿಳಿದಿಲ್ಲವೆ..? ಸುಲಭವಾಗಿ ಆನ್ಲೈನ್ ಮೂಲಕ ವಿವಾಹ ನೋಂದಣಿ ಹೇಗೆ ಮಾಡಿಸಿಕೊಳ್ಳಬಹುದು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ಈ ಮೊದಲು ಮದುವೆಯಾದ ನವ ದಂಪತಿಗಳು ತಮ್ಮ ವಿವಾಹ ನೋಂದಣಿಗಾಗಿ ಸಬ್ ರಿಜಿಸ್ಟಾರ್ ಕಚೇರಿಗೆ ಭೇಟಿ ನೀಡಬೇಕಾಗಿತ್ತು. ಆದರೆ ಇನ್ನು ಮುಂದೆ ಸಬ್ ರಿಜಿಸ್ಟಾರ್ ಕಚೇರಿಗೆ ಹೋಗುವ ಅವಶ್ಯಕತೆ ಇರುವುದಿಲ್ಲ. ಸುಲಭವಾಗಿ ಆನ್ಲೈನ್ ಮೂಲಕವೇ ವಿವಾಹ ನೋಂದಣಿ ಮಾಡಿಸಿಕೊಳ್ಳಬಹುದು.
Marriage Certificate Online Karnataka:
ಇಲ್ಲಿಯವರೆಗೂ ದಂಪತಿಗಳು ತಮ್ಮ ವಿವಾಹ ನೋಂದಣಿ (Marriage Registration Online) ಮಾಡಿಸಿಕೊಳ್ಳು ಸಬ್ ರಿಜಿಸ್ಟರ್ ಕಚೇರಿಗೆ ತೆರಳಿ ರಿಜಿಸ್ಟರ್ ಮಾಡಿಸಿಕೊಳ್ಳಬೇಕಾಗಿತ್ತು. ಅದಕ್ಕೆ ಪರ್ಯಾಯವಾಗಿ ಯಾವುದೇ ಬೇರೆ ವ್ಯವಸ್ಥೆ ಇರಲಿಲ್ಲ. ಆದರೆ ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಿದೆ.
ಇನ್ನು ಮುಂದೆ ವಧು ವರರು ಉಪ ನೋಂದಣಾಧಿಕಾರಿಗಳ ಕಚೇರಿಗೆ ತೆರಳಿ ವಿವಾಹ ನೋಂದಣಿ ಮಾಡಿಸಲು ಅಲೆದಾಡುವ ಅವಶ್ಯಕತೆ ಇರುವುದಿಲ್ಲ. ಇದರ ಬದಲಾಗಿ ಆನ್ಲೈನ್ ಮೂಲಕ ನೊಂದಣಿಗೆ ಅವಕಾಶ ನೀಡಲಾಗಿದೆ.
ಎಲ್ಲಿ ವಿವಾಹ ನೋಂದಣಿ ಮಾಡಿಸಿಕೊಳ್ಳಬೇಕು..?
ವಿವಾಹ ನೋಂದಣಿ ಮಾಡಿಸಿಕೊಳ್ಳಲು ದಂಪತಿಗಳು ಕಾವೇರಿ 2.0 ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದೆ. ಇದರಿಂದಾಗಿ ಸಬ್ ರಿಜಿಸ್ಟರ್ ಕಚೇರಿಗೆ ಅಲೆಯುವ ಅವಶ್ಯಕತೆ ಇರುವುದಿಲ್ಲ.
ಅಧಿಕೃತ ವೆಬ್ಸೈಟ್:
kaveri.karnataka.gov.in ಭೇಟಿ ನೀಡಿ ಕಾವೇರಿ ಪೋರ್ಟಲ್ ನಲ್ಲಿ ಲಾಗಿನ್ ಮಾಡಿಕೊಂಡು ವಿವಾಹ ನೋಂದಣಿ ಸೇವೆ ಆಯ್ಕೆ ಮಾಡಿಕೊಳ್ಳಿ ಮತ್ತು ಅಲ್ಲಿ ನಿಮ್ಮ ವಿವರಗಳನ್ನು ನಮೂದಿಸಿ ಅರ್ಜಿ ಸಲ್ಲಿಸಿ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080 68265316 ಅನ್ನು ಸಂಪರ್ಕಿಸಬಹುದಾಗಿದೆ.
ಇತರೆ ಮಾಹಿತಿಗಳನ್ನು ಓದಿ: