ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. 2024-25 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ (Prize Money Scholarship) ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಸಬಹುದು.
ಪ್ರೋತ್ಸಾಹ ಧನ:
10th/SSLC ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ನಂತರದ ಪ್ರೋತ್ಸಾಹ ಧನ:
12th/ಪಿಯುಸಿ, ಪಾಲಿಟೆಕ್ನಿಕ್ ಡಿಪ್ಲೋಮಾ, ಐ.ಟಿ.ಐ, ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಹರು.
ಆದಾಯ ಮಿತಿ:
- 8ನೇ ತರಗತಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂ. ಮೀರಿರಬಾರದು.
- 9-10ನೇ ತರಗತಿಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಮಿತಿ 2.5 ಲಕ್ಷ ರೂ. ಮೀರಿರಬಾರದು.
SC Prize Money Amount in Karnataka 2025:
- ದ್ವೀತಿಯ ಪಿಯುಸಿ, ಮೂರು ವರ್ಷದ ಡಿಪ್ಲೋಮಾ: 20,000 ರೂಪಾಯಿ
- ಪದವಿ: 25,000 ರೂಪಾಯಿ
- ಯಾವುದೆ ಸ್ನಾತಕೋತ್ತರ (ಉದಾ: M.A., M.Sc ಮುಂತಾದ): 30,000 ರೂಪಾಯಿ
- Agriculture, Engineering, Veterinary, Medicine: 35,000 ರೂಪಾಯಿ
ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ವಿದ್ಯಾರ್ಥಿವೇತನ/ ಪ್ರೋತ್ಸಾಹ ಧನ ನೀಡಲು ಅರ್ಜಿ ಕರೆಯಲಾಗಿ. ನೀವು ಕೂಡ ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಿ ಇದರ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಕಡ್ಡಾಯವಾಗಿ Bio-Metric e-Authentication ಮಾಡಿಸಿಕೊಂಡಿರಬೇಕು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಮತ್ತು EDCS ನಾಗರಿಕ ಸೇವಾ ಕೇಂದ್ರಗಳಾದ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ Bio Metric e-Authentication ಮಾಡಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಸದರಿ ಸೇವೆಯು ಉಚಿತವಾಗಿದ್ದು, EDCS ನಾಗರಿಕ ಸೇವಾ ಕೇಂದ್ರಗಳಲ್ಲಿ ವಿದ್ಯಾರ್ಥಿಯು ಯಾವುದೇ ಹಣ ಪಾವತಿಸುವಂತಿಲ್ಲ.
ಆಧಾರ್ ಸೀಡಿಂಗ್:
ವಿದ್ಯಾರ್ಥಿವೇತನ/ಪ್ರೋತ್ಸಾಹ ಧನ ಕಾರ್ಯಕ್ರಮದಡಿ ಮಂಜೂರಾದ ಮೊತ್ತವನ್ನು ವಿದ್ಯಾರ್ಥಿಗಳ ಆಧಾರ್ ಜೋಡಿತ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದ್ದು, ಸದರಿ ಪ್ರಕ್ರಿಯೆಗೆ ವಿದ್ಯಾರ್ಥಿಯ ಆಧಾರ್ ಸಂಖ್ಯೆಯನ್ನು ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ.
Prize Money Scholarship 2025 ಪ್ರಮುಖ ಲಿಂಕ್ಗಳು:
SC Prize Money ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
ST Prize Money ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
ಅಧಿಕೃತ ವೆಬ್ಸೈಟ್ಗಳು: ssp.postmatric.karnataka.gov.in, swdservices.karnataka.gov.in, twd.karnataka.gov.in
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಜಿಲ್ಲಾ ಅಥವಾ ತಾಲ್ಲೂಕು ಮಟ್ಟದ ಅಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು. ಇಲಾಖೆಯ ಸಹಾಯವಾಣಿ: 9482300400
ಇತರೆ ಮಾಹಿತಿಗಳನ್ನು ಓದಿ: