Ration Card Food Kit: ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್, ಅಕ್ಕಿಯೊಂದಿಗೆ ಸಿಗಲಿದೆ ಆಹಾರ ಕಿಟ್

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಗುಡ್ ನ್ಯೂಸ್. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯು ಒಂದು. ರೇಷನ್ ಕಾರ್ಡ್ (Ration Card Food Kit) ಹೊಂದಿರುವ ಫಲಾನುಭವಿಗಳಿಗೆ ಪ್ರತಿ ತಿಂಗಳು ಉಚಿತವಾಗಿ ಪಡಿತರವನ್ನು ನೀಡುತ್ತಾರೆ.

ಅನ್ನಭಾಗ್ಯ ಯೋಜನೆಯಡಿ BPL ಕಾರ್ಡ್ ಹೊಂದಿರುವ ಫಲಾನುಭವಿ ಕುಟುಂಬದ ಪ್ರತಿ ಸದಸ್ಯರಿಗೆ 10 kg ಅಕ್ಕಿಯನ್ನು ನೀಡುವುದಾಗಿ ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಿಸಿತ್ತು. ಅಕ್ಕಿಯ ಕೊರತೆಯಿಂದಾಗಿ 5kg ಅಕ್ಕಿ ಜೊತೆಗೆ, ಇನ್ನುಳಿದ 5 ಕೆ.ಜಿ ಯ ಅಕ್ಕಿಯ ಬದಲು ಹಣವನ್ನು ನೀಡುತ್ತಿದ್ದರು.

Ration Card Food Kit:

ಇನ್ಮುಂದೆ ಅನ್ನಭಾಗ್ಯ ಯೋಜನೆಯ ಹಣದ ಬದಲಿಗೆ ಆಹಾರ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಆಹಾರ ಸಚಿವರಾದ ವಿ.ಮುನಿಯಪ್ಪನವರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದಂತ ಸಚಿವರು, ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ 5 Kg ಅಕ್ಕಿಯ ಬದಲಾಗಿ DBT ಮೂಲಕ ಹಣವನ್ನು ಪಾವತಿ ಮಾಡಲಾಗುತ್ತಿದೆ. ಇನ್ಮುಂದೆ ಇದರ ಬದಲಿಗೆ ಎಣ್ಣೆ, ಬೇಳೆಯನ್ನು ಒಳಗೊಂಡಂತೆ ಆಹಾರ ಕಿಟ್ ವಿತರಣೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಅನ್ನಭಾಗ್ಯದ ಯೋಜನೆಯ ಹಣವು ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಸರಿಯಾಗಿ ಸಮಯಕ್ಕೆ ಜಮಾ ಆಗದಿರುವ ಕಾರಣ ಅನ್ನಭಾಗ್ಯ ಹಣದ ಬದಲಿಗೆ ಆಹಾರ ಕಿಟ್ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದೆ ಎಂದು ಹೇಳಿದ್ದಾರೆ.

ಇತರೆ ಮಾಹಿತಿಗಳನ್ನು ಓದಿ:

ಉಚಿತ ಹೊಲಿಗೆ ಯಂತ್ರ ಯೋಜನೆ 2024

ಗೃಹಲಕ್ಷ್ಮೀ ಯೋಜನೆ DBT Status ಚೆಕ್ ಮಾಡಿ

ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

Leave a Comment