‌Ration Card New Update: ರೇಷನ್ ಕಾರ್ಡ್ ಫಲಾನುಭವಿಗಳಿಗೆ ಹೊಸ ಅಪ್‌ಡೇಟ್

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಗುಡ್ ನ್ಯೂಸ್, ಬಡತನ ರೇಖೆಗಿಂತ ಕೆಳಗಿರುವವರಿಗೆ ಸರ್ಕಾರ ರೇಷನ್ ಕಾರ್ಡ್ (Ration Card New Update) ಅನ್ನು ನೀಡುತ್ತದೆ. ರೇಷನ್ ಕಾರ್ಡ್ ಹೊಂದಿರುವರು ಸರ್ಕಾರವು ನೀಡುತ್ತಿರುವ ಯೋಜನೆಗಳ ಸೌಲಭ್ಯವನ್ನು ಪಡದುಕೊಳ್ಳಬಹುದು.

ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಸರ್ಕಾರ ಉಚಿತವಾಗಿ ಪ್ರತಿ ತಿಂಗಳು ಪಡಿತರವನ್ನು ನೀಡುತ್ತಾರೆ. ಸರ್ಕಾರವು ಉಚಿತವಾಗಿ ನೀಡುತ್ತಿರುವ ಪಡಿತರದಿಂದ ಬಡವರಿಗೆ ಸಾಕಷ್ಟು ಅನುಕೂಲವಾಗಿದೆ. ಹಾಗೂ ರೇಷನ್ ಕಾರ್ಡ್ ನಿಮ್ಮ ಬಳಿ ಇದ್ದರೆ ವೈದ್ಯಕೀಯ ಸೌಲಭ್ಯಗಳ ಲಾಭವನ್ನು ಪಡೆದುಕೊಳ್ಳಬಹುದು.

Ration Card New Update:

ರಾಜ್ಯದಲ್ಲಿ ಅರ್ಹರಲ್ಲದವರೂ BPL ರೇಷನ್ ಕಾರ್ಡ್ ಹೊಂದಿರುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಅನರ್ಹ ಫಲಾನುಭವಿಗಳಿಗೆ ತಮ್ಮ ರೇಷನ್ ಕಾರ್ಡ್ ರದ್ದುಗೊಳ್ಳುವ ಆತಂಕ ಕೂಡ ಎದುರಾಗಿತ್ತು. ಅಂತವರ BPL ಕಾರ್ಡ್ ರದ್ದಾದರೂ, ಅವರನ್ನು APL ಕಾರ್ಡ್ ಗೆ ವರ್ಗಾವಣೆ ಮಾಡುವುದಾಗಿ ಆಹಾರ ಸಚಿವರಾದ ವಿ.ಮುನಿಯಪ್ಪನವರು ಮಾಹಿತಿ ನೀಡಿದ್ದಾರೆ.

ಸರ್ವರ್ ಸಮಸ್ಯೆಯಿಂದಾಗಿ ಅನ್ನಭಾಗ್ಯ ಯೋಜನೆಯ ಹಣವು ಈವರೆಗೂ ಬಿಡುಗಡೆಯಾಗಿಲ್ಲ. ಅನ್ನಭಾಗ್ಯ ಯೋಜನೆಯ ಹಣವನ್ನು ಪ್ರತಿ ತಿಂಗಳು 10 ನೇ ತಾರೀಖಿನಂದು ಬಿಡುಗಡೆ ಮಾಡಲಾಗುತ್ತಿತ್ತು. ಸರ್ವರ್ ಸಮಸ್ಯೆಯಿಂದಾಗಿ ಹಣವನ್ನು‌ ಬಿಡುಗಡೆ ಮಾಡಿಲ್ಲ ಮುಂದಿನ ವಾರ ಹಣ ಬಿಡುಗಡೆಯಾಗಲಿದೆ ಎಂದ ಸಚಿವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಶೇ.80ರಷ್ಟು ಬಡತನವಿದೆ. ಬಡವರಿಗೆ ಬಿಪಿಎಲ್ ಕಾರ್ಡ್ ಅನ್ನು ಸರ್ಕಾರ ವಿತರಣೆ ಮಾಡುತ್ತದೆ. ಆದರೆ ಅನರ್ಹರು ಕೂಡ BPL ಕಾರ್ಡ್ ಪಡೆದುಕೊಂಡಿರುವುದರ ಬಗ್ಗೆ ಪರಿಶೀಲಿಸಲಾಗುತ್ತಿದೆ. ಅಂತವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ, ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವರು ಹೇಳಿದ್ದಾರೆ.

ಇತರೆ ಮಾಹಿತಿಗಳನ್ನು ಓದಿ:

ಗೃಹಲಕ್ಷ್ಮೀ ಯೋಜನೆ DBT Status ಚೆಕ್ ಮಾಡಿ

ಉಚಿತ ಹೊಲಿಗೆ ಯಂತ್ರ ಯೋಜನೆ 2024

Leave a Comment