SSP ಮೆಟ್ರಿಕ್ ನಂತರ ಶುಲ್ಕ ಮರುಪಾವತಿ ಯೋಜನೆ, ಅರ್ಜಿ ಆಹ್ವಾನ | SSP Scholarship 2024 For Minority Students Apply Online @ssp.postmatric.karnataka.gov.in

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ನೀವು ಕೂಡಾ ಮೆಟ್ರಿಕ್ ನಂತರದ ಕೊರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿದ್ದೀರಾ..? ಶುಲ್ಕ ಮರುಪಾವತಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಬೇಕೆ..? SSP Scholarship 2024 ಯಾರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.

ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಆಸಕ್ತ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2024-25 ನೇ ಸಾಲಿಗೆ 12th, ಡಿಪ್ಲೊಮಾ, ITI, ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಶುಲ್ಕ ಮರುಪಾವತಿ ಯೋಜನೆಯಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಬಹುದು.

SSP Scholarship 2024 For OBC:

SSP Scholarship 2024 ಅರ್ಹತೆಗಳು:

  • ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರು ಅರ್ಜಿ ಸಲ್ಲಿಸಬಹುದು.
  • ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಮೆಟ್ರಿಕ್ ನಂತರದ ಕೋರ್ಸುಗಳ ಶುಲ್ಕ ಮರುಪಾವತಿ ಯೋಜನೆಗಾಗಿ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 2‌ ಲಕ್ಷ ಒಳಗಿರಬೇಕು. ಮತ್ತು ಮೆರಿಟ್-ಕಮ್-ಮೀನ್ಸ್ ಶುಲ್ಕ ಮರುಪಾವತಿ ಯೋಜನೆಗಾಗಿ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು .2.5 ಲಕ್ಷ ರೂ ಮೀರಿರಬಾರದು.

ವಿಶೇಷ ಸೂಚನೆ:

  • ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗೆ ಆಧಾರ್ ಸೀಡಿಂಗ್ ಮತ್ತು NPCI ಮ್ಯಾಪಿಂಗ್ ಆಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.
  • ಈ ಹಿಂದೆ ಸದರಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕು,
  • ಸದರಿ ಶುಲ್ಕ ಮರುಪಾವತಿ ಯೋಜನೆಯ ಪ್ರಕ್ರಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳು ಹಾಗೂ ಮಾರ್ಗಸೂಚಿಗಳಿಗೆ ಒಳಪಟ್ಟಿರುತ್ತದೆ.

SSP Post Matric Scholarship 2024 Documents:

  1. ಮೊಬೈಲ್‌ ಸಂಖ್ಯೆ
  2. ಆಧಾರ್ ಸಂಖ್ಯೆ
  3. SSLC ಮಾರ್ಕ್ಸ್ ಕಾರ್ಡ್ ‌
  4. ಇ-ಮೇಲ್ ಐ.ಡಿ
  5. ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  6. ಕಾಲೇಜು ದಾಖಲಾತಿ/ನೋಂದಣಿ ಸಂಖ್ಯೆ
  7. ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
  8. ಮನೆಯ ವಿಳಾಸ ಪುರಾವೆ
  9. ಕುಟುಂಬ ಗುರುತಿನ ಸಂಖ್ಯೆ
  10. ಸಂಬಂದಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ )
  11. ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ )
  12. ಹಾಗೂ ಇತರೆ ಅಗತ್ಯ ದಾಖಲೆಗಳು

ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಜಿಲ್ಲಾ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು (MIC) ಸಂಪರ್ಕಿಸಬಹುದು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23-08-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-10-2024

Post Matric SSP Scholarship ಪ್ರಮುಖ ಲಿಂಕ್‌ಗಳು
ಅರ್ಜಿ ಸಲ್ಲಿಕೆ ಲಿಂಕ್:
Apply ಮಾಡಿ
ಅಧಿಕೃತ ವೆಬ್‌ಸೈಟ್‌: ssp.postmatric.karnataka.gov.in, dom.karnataka.gov.in

ಇತರೆ ಮಾಹಿತಿಗಳನ್ನು ಓದಿ:

ಸಂತೂರ್ ವಿದ್ಯಾರ್ಥಿವೇತನ 2024

Leave a Comment