ಎಲ್ಲರಿಗೂ ನಮಸ್ಕಾರ, ನೀವು ಕೂಡ ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಸಲ್ಲಿಸಬೇಕೆ..? ಸರ್ಕಾರದಿಂದ ಸಬ್ಸಿಡಿ ಪಡೆದುಕೊಳ್ಳಬೇಕೆ..? ಹಾಗಿದ್ದರೇ ಚಿಂತೆ ಬಿಡಿ ಈ ಲೇಖನ ನಿಮಗಾಗಿ. ಸ್ವಾವಲಂಬಿ ಸಾರಥಿ ಯೋಜನೆಯ (Swavalambi Sarathi Scheme Karnataka) ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
Vehicle Subsidy Scheme Karnataka:
ಯೋಜನೆಯ ಹೆಸರು: ಸ್ವಾವಲಂಬಿ ಸಾರಥಿ ಯೋಜನೆ (Swawalambi Sarathi)
ಸಹಾಯಧನ ಮೊತ್ತ: ವಾಹನದ ಮೌಲ್ಯದ ಶೇ.50 ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ವರೆಗೆ ಸಹಾಯಧನ ನೀಡುತ್ತಾರೆ.
ಅರ್ಜಿದಾರರ ವಯಸ್ಸು: ಕನಿಷ್ಢ 21 ರಿಂದ ಗರಿಷ್ಠ 45 ವರ್ಷ ಮೀರಿರಬಾರದು.
Swavalambi Sarathi Scheme ವಿವರ:
ಉದ್ಯೋಗ ಇಲ್ಲದಿರುವ ಯುವ ಜನರಿಗೆ ಸ್ವಯಂ ಉದ್ಯೋಗ ಆರಂಭಿಸಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನವನ್ನು (ಟ್ಯಾಕ್ಸಿ, ಟಾಟಾ ಎಸಿ, ಗೂಡ್ಸ್ ವಾಹನ ಇತ್ಯಾದಿ ನಾಲ್ಕು ಚಕ್ರಗಳ ವಾಹನ) ಖರೀದಿಸಲು ಬ್ಯಾಂಕ್ಗಳಿಂದ ಪಡೆಯುವಂತ ಸಾಲದ ಶೇ.50 ರಷ್ಟು ಅಥವಾ ಗರಿಷ್ಠ್ 3 ಲಕ್ಷ ರೂ (ಎರಡರಲ್ಲಿ ಯಾವುದು ಕಡಿಮೆಯೋ ಅಷ್ಟು) ಸಹಾಯಧನವನ್ನು ನಿಗಮಗಳ ವತಿಯಿಂದ ಮಂಜೂರು ಮಾಡುತ್ತಾರೆ.
Swavalambi Sarathi ಅರ್ಹತೆಗಳು:
- ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು ಈ ಕೆಳಗಿನ ಅರ್ಹತೆಯನ್ನು ಹೊಂದಿರಬೇಕು.
- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ 98 ಸಾವಿರ ರೂಪಾಯಿ. ಹಾಗೂ ಪಟ್ಟಣ ಪ್ರದೇಶದವರಿಗೆ 1,20 ಸಾವಿರ ರೂ. ಒಳಗಿರಬೇಕು
- ಅರ್ಜಿದಾರರ ವಯಸ್ಸು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.
- ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.
- ಅರ್ಜಿದಾರರು ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.
- ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ದೊರೆಯಲಿದೆ.
- ಅರ್ಜಿದಾರರು ತಮ್ಮ ಮೊಬೈಲ್ ನಂಬರನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಲಿಂಕ್ ಮಾಡಿರಬೇಕು.
- ಈ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಫಲಾನುಭವಿಯು ಸೈಂ ಟ್ಯಾಕ್ಸಿ ಚಾಲನೆ (Yellow Board) ಉದ್ದೇಶಕ್ಕೆ ವಾಹನವನ್ನು ನೋಂದಾಯಿಸತಕ್ಕದ್ದು.
- ಈ ಯೋಜನೆಯಡಿಯಲ್ಲಿ ಉಳಿದ ಮೊತ್ತವನ್ನು ಬ್ಯಾಂಕ್/ ಹಣಕಾಸು ಸಂಸ್ಥೆಗಳಿಂದ ಸಾಲದ ರೂಪದಲ್ಲಿ ಪಡೆಯುವುದು. ಈ ಸಾಲಕ್ಕೆ ಬ್ಯಾಂಕ್ / ಹಣಕಾಸು ಸಂಸ್ಥೆಗಳು ನಿಗದಿಪಡಿಸುವ ಬಡ್ಡಿಯನ್ನು ಅರ್ಜಿದಾರರು ಪಾವತಿಸಬೇಕು.
Swavalambi Sarathi Scheme ದಾಖಲೆಗಳು:
- ಅರ್ಜಿದಾರರ ಜಾತಿ ಪ್ರಮಾಣಪತ್ರ (Caste Certificate)
- ಅರ್ಜಿದಾರರ ಆದಾಯ ಪ್ರಮಾಣಪತ್ರ (Income Certificate)
- ಅರ್ಜಿದಾರರ ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
- ವಾಹನ ಚಾಲನಾ ಪರವಾನಗಿ (Driving Licence) ಪ್ರತಿ
- ಬ್ಯಾಂಕ್ ಪಾಸ್ ಬುಕ್
- ವಾಹನದ ಅಂದಾಜು ದರಪಟ್ಟಿ
- ಅರ್ಜಿದಾರರ ಸ್ವಯಂ ಘೋಷಣೆ ಪತ್ರ
- 2 ಪಾಸ್ಪೋರ್ಟ್ ಅಳತೆಯ ಪೋಟೋ
- ಅರ್ಜಿದಾರರ ಮತ್ತು ಕುಟುಂಬದ ಸದಸ್ಯರು ವಾಹನ ಖರೀದಿಗೆ ರಾಜ್ಯ ಸರ್ಕಾರದ ಯಾವುದೇ ಯೋಜನೆಯಡಿ ಸಾಲ ಸೌಲಭ್ಯ ಪಡೆದಿಲ್ಲದಿರುವ ಬಗ್ಗೆ ಜಿಲ್ಲಾ ವ್ಯವಸ್ಥಾಪಕರಿಂದ ದೃಢೀಕರಣ ಪತ್ರ
- ಈ ಯೋಜನೆಯಡಿ ಪಡೆದ ವಾಹನವನ್ನು ಯಾರಿಗೂ ಪರಭಾರೆ ಮಾಡದಿರುವ ಬಗ್ಗೆ ದೃಢೀಕರಣ ಪತ್ರ
- ಅರ್ಜಿದಾರರು ನಿರುದ್ಯೋಗಿ ಆಗಿರಬೇಕು. (ಸ್ವಯಂ ಘೋಷಣಾ ಪತ್ರ ಸಲ್ಲಿಸುವುದು).
- Swavalambi Sarathi Scheme in Karnataka: ಯಾರು ಅರ್ಜಿ ಸಲ್ಲಿಸಬಹುದು?
Vehicle Subsidy Scheme Karnataka 2024 ಅರ್ಜಿ ಸಲ್ಲಿಕೆ ಹೇಗೆ?
ಅಗತ್ಯ ದಾಖಲೆಗಳೊಂದಿಗೆ ಅರ್ಜಿದಾರರು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಲಿಂಕ್ನ್ನು ಕೇಳಗೆ ನೀಡಲಾಗಿದೆ. ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
Swavalambi Sarathi Scheme Karnataka Application Link:
ಆನ್ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: sevasindhu.karnataka.gov.in, sevasindhuservices.karnataka.gov.in
Swavalambi Sarathi Scheme last date 2024: 15-09-2024
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳ ಯೋಜನೆಗಳಡಿ ಅರ್ಜಿ ಸಲ್ಲಿಸಲು ದಿನಾಂಕ: 30.08.2024 ಮತ್ತು 31.08.2024 ಕೊನೆಯ ದಿನಾಂಕವಾಗಿರುತ್ತದೆ. (ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮವನ್ನು ಹೊರತು ಪಡಿಸಿ) ಹಿಂದುಳಿದ ವರ್ಗಗಳ ಫಲಾಪೇಕ್ಷಿಗಳ ಹಿತದೃಷ್ಟಿಯಿಂದ, ಅರ್ಜಿ ಸಲ್ಲಿಸಲು ದಿನಾಂಕ: 15-09-2024 ರವರೆಗೆ ವಿಸ್ತರಿಸಲು ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರುಗಳು ಮೌಖಿಕವಾಗಿ ಸಹಮತ ವ್ಯಕ್ತ ಪಡಿಸಿರುತ್ತಾರೆ. ಆದ್ದರಿಂದ ಅರ್ಜಿಸಲ್ಲಿಸಲು ಕೊನೆಯ ದಿನಾಂಕವನ್ನು 15-09-2024 ರವರೆಗೆ ವಿಸ್ತರಿಸಲು ಕೋರಿದೆ.
ವಿಷೇಶ ಸೂಚನೆಗಳು:
- ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
- ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
- ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
- 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ನಿಯಮಗಳು: ಮಂಜೂರಾತಿ ಪಡೆದ ಫಲಾನುಭವಿಯು ಅನರ್ಹರೆಂದು ಕಂಡು ಬಂದಲ್ಲಿ ಮಂಜೂರಾತಿಯನ್ನು ಯಾವುದೇ ಹಂತದಲ್ಲಿ ರದ್ದು ಪಡಿಸಲಾಗುತ್ತದೆ.
ಇತರೆ ಮಾಹಿತಿಗಳನ್ನು ಓದಿ: